ಕಾಪು : ಬೀಚ್ ಸ್ವಚ್ಛತಾ ಅಭಿಯಾನ
Posted On:
17-09-2022 10:31PM
ಕಾಪು : ಇಲ್ಲಿನ ಪುರಸಭಾ ವ್ಯಾಪ್ತಿಯಲ್ಲಿ ಭಾರತೀಯ ಸ್ವಚ್ಛತಾ ಲೀಗ್ ದೇಸೀಕ್ರೂ ಸಂಘಟನೆ, ಜಿಪ್ಸಿಶನ್ ಸಂಸ್ಥೆಯಿಂದ ಪ್ರವಾಸೋದ್ಯಮ ಇಲಾಖೆ ವತಿಯಿಂದ ಶನಿವಾರ ಬೆಳಗ್ಗೆ ಕಾಪು ಲೈಟ್ ಹೌಸ್ ಬೀಚಿನಲ್ಲಿ ಸ್ವಚ್ಛತಾ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮವನ್ನು ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭ ಕಾಪು ಪುರಸಭಾ ಅಧಿಕಾರಿ ವೆಂಕಟೇಶ್ ನಾವಡ ಮಾತನಾಡಿ, ಪ್ರವಾಸೋದ್ಯಮ ಕ್ಷೇತ್ರವಾದ ಕಾಪು ವಿನಲ್ಲಿ ವಿವಿಧ ಸಂಘಟನೆಗಳ ಆಯೋಜನೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಕೇಂದ್ರ ಸರಕಾರದ ಯೋಜನೆ ಇದಾಗಿದ್ದು, ಇದರಲ್ಲಿ ನಾವು ಸಹಭಾಗಿ ಆಗುತ್ತಿದ್ದೇವೆ ಎಂದರು.
ಈ ಸಂದರ್ಭ ಕಾಪು ಪುರಸಭಾ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಸದಸ್ಯರು ಉಪಸ್ಥಿತರಿದ್ದರು.