ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವದ ಹದಗೆಟ್ಟ ರಸ್ತೆ ದುರಸ್ತಿಗೊಳಿಸಿದ ಬಂಟಕಲ್ಲು ನಾಗರಿಕ ಸೇವಾ ಸಮಿತಿ ; ಸಾರ್ವಜನಿಕರಿಂದ ಶ್ಲಾಘನೆ

Posted On: 18-09-2022 08:36PM

ಶಿರ್ವ : ಇಲ್ಲಿನ ರಾಜ್ಯ ರಸ್ತೆಯು ಗಣಪತಿ ದೇವಸ್ಥಾನ ಮತ್ತು ಜುಮ್ಮಾ ಮಸೀದಿ ಬಳಿ ತೀವ್ರ ಹದಗೆಟ್ಟಿದ್ದು, ಶಿಕ್ಷಕ ಅಲ್ವಿನ್ ದಾಂತಿಯವರು ರಸ್ತೆಯ ಛಾಯಾಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಈ ಘಟನೆಯ ಬಳಿಕ ಎಚ್ಚೆತ್ತ ಸಾರ್ವಜನಿಕರು ಇಲಾಖೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ನಿಟ್ಟಿನಲ್ಲಿ ಭಾನುವಾರ ಬಂಟಕಲ್ಲು ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ರಾಮರಾಯ ಪಾಟ್ಕರ್ ಮತ್ತು ತಂಡದ ಸದಸ್ಯರು ಗುಂಡಿಗಳಿಗೆ ಜಲ್ಲಿ ಕಾಂಕ್ರೀಟ್ ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇವರ ಸೇವಾಕಾರ್ಯಕ್ಕೆ ಶಿರ್ವ ಗ್ರಾಮಸ್ಥರು ಹಾಗೂ ವಾಹನ ಚಾಲಕರು ಅಭಿನಂದನೆ ಸಲ್ಲಿಸಿದ್ದಾರೆ.