ಉಡುಪಿ : ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ - ವಿಶ್ವಕರ್ಮ, ನಾರಾಯಣಗುರು ಜಯಂತಿ ಆಚರಣೆ ;ಸಾಧಕರಿಗೆ ಸನ್ಮಾನ
Posted On:
18-09-2022 08:51PM
ಉಡುಪಿ : ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆಯಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಡಾ| ಅಣ್ಣಯ್ಯ ಕುಲಾಲ್, ಅತ್ಯುತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂಜೀವ ದೇವಾಡಿಗ, ಕೊರಗ ಸಮುದಾಯದ ಗುರಿಕಾರ ಸುಂದರ ಕೊರಗ ಇವರನ್ನು ಸನ್ಮಾನಿಸಲಾಯಿತು.
ಭಗವಾನ್ ವಿಶ್ವಕರ್ಮರ ಕುರಿತು ಉಪನ್ಯಾಸವನ್ನು ಕಟಪಾಡಿ ಆನೆಗುಂದಿ ಸಂಸ್ಥಾನದ ಪವನ್ ಶರ್ಮ ನಡೆಸಿಕೊಟ್ಟರು. ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತು ಉಪನ್ಯಾಸವನ್ನು ಉಡುಪಿಯ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ದಯಾನಂದ ಡಿ. ನೆರವೇರಿಸಿಕೊಟ್ಟರು.
ಈ ಸಂದರ್ಭದಲ್ಲಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ರಾಜ್ಯ ಒಬಿಸಿ ಮೋರ್ಚಾದ ಉಪಾಧ್ಯಕ್ಷ ಅಶೋಕ್ ಮೂರ್ತಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಸುವರ್ಣ, ಜಿಲ್ಲಾ ಒಬಿಸಿ ಮೋರ್ಚಾದ ಉಸ್ತುವಾರಿ ರೇಷ್ಮಾ ಉದಯ ಶೆಟ್ಟಿ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಒಬಿಸಿ ಮೋರ್ಚಾದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು, ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಪದಾಧಿಕಾರಿಗಳು, ಬಿಲ್ಲವ ಸಮಾಜ ಬಾಂಧವರು ಮತ್ತು ವಿಶ್ವಕರ್ಮ ಸಮಾಜ ಬಾಂಧವರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಕುಲಾಲ್ ಕಡಿಯಾಳಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅರುಣ್ ಕುಮಾರ್ ಬಾಣ ವಂದಿಸಿದರು.