ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಅನ್ನಭಾಗ್ಯ ಯೋಜನೆಯ ಅಕ್ರಮ ದಾಸ್ತಾನಿನ ಅಕ್ಕಿ ವಶ

Posted On: 21-09-2022 02:59PM

ಪಡುಬಿದ್ರಿ : ನಡ್ಸಾಲು ಗ್ರಾಮದ ಕನ್ನಂಗಾರ್ ಎಂಬಲ್ಲಿ ಪಡಿತರ ಅಕ್ಕಿಯನ್ನು ದಾಸ್ತಾನು ಮಾಡಿರುವ ಬಗ್ಗೆ ಮಾಹಿತಿಯ ಆಧಾರದ ಮೇಲೆ ಕಾಪು ತಾಲೂಕು ಆಹಾರ ನಿರೀಕ್ಷಕ ಟಿ. ಲೀಲಾನಂದ, ಕಾಪು ಪೊಲೀಸ್ ವೃತ್ತ ನಿರೀಕ್ಷಕರಾದ ಕೆ.ಸಿ. ಪೂವಯ್ಯ ಮತ್ತು ಪಡುಬಿದ್ರಿ ಪೋಲೀಸರು ದಾಳಿ ನಡೆಸಿ 2,87,606 ರೂಪಾಯಿ ಮೌಲ್ಯದ ಅಕ್ಕಿ ವಶಪಡಿಸಿಕೊಂಡಿದ್ದಾರೆ.

ಇಲ್ಲಿನ ಕನ್ನಂಗಾರ್‌‌‌‌ನ ಮೊಹಮದ್ ಶಫೀಕ್ ಎಂಬುವವರ ಮನೆಯ ಮೇಲೆ ದಾಳಿ ನಡೆಸಿ ಪರಿಶೀಲಿಸಲಾಗಿ, ಆಪಾದಿತರ ಮನೆಯ ಹೊರಾಂಗಣ ಮತ್ತು ಎದುರು ಇರುವ ಗೋದಾಮಿನಲ್ಲಿ ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ವಿತರಿಸುವ ಪಡಿತರ ಅಕ್ಕಿಯಾಗಿದ್ದು, 50 ಕೆ.ಜಿ ತೂಕದ 33 ಚೀಲ ಬೆಳ್ತಿಗೆ ಅಕ್ಕಿ (ಒಟ್ಟು ತೂಕ 1650 ಕೆ.ಜಿ), 50 ಕೆ ಜಿ ತೂಕದ 192 ಚೀಲ ಕುಚಲಕ್ಕಿ (ಒಟ್ಟು ತೂಕ 9600 ಕೆ.ಜಿ), 20 ಕೆ ಜಿ ತೂಕದ 31 ಚೀಲ ಕುಚಲಕ್ಕಿ (ಒಟ್ಟು ತೂಕ 620 ಕೆ.ಜಿ), 30 ಕೆ.ಜಿ. ತೂಕದ 02 ಚೀಲ ಕುಚಲಕ್ಕಿ (ಒಟ್ಟು ತೂಕ 60 ಕೆ.ಜಿ), ಮತ್ತು ಹೊಲಿಗೆ ಹಾಕದೇ ಇರುವ 10 ಚೀಲ ಕುಚಲಕ್ಕಿ (ಒಟ್ಟು ತೂಕ 303 ಕೆ.ಜಿ) ಸೇರಿದಂತೆ ಒಟ್ಟು 2,87,606/- ರೂಪಾಯಿ ಮೌಲ್ಯದ 13,073 ಕೆ.ಜಿ. ಅಕ್ಕಿ, ರೂಪಾಯಿ 4,000/- ಮೌಲ್ಯದ ತೂಕದಯಂತ್ರ-01, ರೂಪಾಯಿ 5,000/- ಮೌಲ್ಯದ ಚೀಲ ಹೊಲಿಯುವ ಯಂತ್ರ-01 ನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ