ಕಾಪು : ಕರ್ನಾಟಕ ಸರಕಾರ ಕುಕ್ಕುಟ ಮಹಾಮಂಡಳಿ ಬೆಂಗಳೂರು ಇವರ ವತಿಯಿಂದ ಪಶು ಸಂಗೋಪನಾ ಇಲಾಖೆಯ ಸಹಯೋಗದೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ವಿತರಿಸುವ ಕಾರ್ಯಕ್ರಮವು ಕಾಪು ಪಶು ಆಸ್ಪತ್ರೆಯಲ್ಲಿ ಗುರುವಾರ ನಡೆಯಿತು.
ಕಾಪು ತಾಲೂಕು ಪಶು ವೈದ್ಯಾಧಿಕಾರಿ ಡಾ. ಅರುಣ್ ಹೆಗ್ಡೆ ಮಾತನಾಡಿ, ಕಾಪು ತಾಲೂಕಿನ 106 ಮಂದಿ ಫಲಾನುಭವಿಗಳಿಗೆ ತಲಾ 20 ರಂತೆ ನಾಟಿ ಕೋಳಿ ವಿತರಿಸಲಾಗುತ್ತಿದೆ. ಈ ಯೋಜನೆಯ ಮೂಲಕವಾಗಿ ಗ್ರಾಮೀಣ ರೈತ ಮಹಿಳೆಯರನ್ನು ಆರ್ಥಿಕವಾಗಿ ಬಲವಪಡಿಸುವ ಉದ್ದೇಶ ಹೊಂದಲಾಗಿದೆ ಎಂದರು.
ಕರ್ನಾಟಕ ಕುಕ್ಕುಟ ಮಹಾಮಂಡಳಿಯ ಜಾನುವಾರು ಅಧಿಕಾರಿ ಅನಿಲ್ ಕುಮಾರ್, ಕಟಪಾಡಿ ಪಶು ವೈದ್ಯಕೀಯ ಕೇಂದ್ರದ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿಜಯಕುಮಾರ್, ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ವಸಂತ ಮಾದರ, ಶಿವ ಪುತ್ರಯ್ಯ ಗುರುಸ್ವಾಮಿ, ಸಹಾಯಕ ಸಿಬಂದಿಗಳಾದ ಜಯೇಶ್, ಧನವತಿ, ಪೂಜಾ ಮೊದಲಾದವರು ಉಪಸ್ಥಿತರಿದ್ದರು.