ಕಾಪು : ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ಹಾಗೂ ದುರ್ಗಾವಾಹಿನಿ ಮೂಡುಬೆಳ್ಳೆ ಘಟಕದ ವತಿಯಿಂದ ಅಕ್ಟೋಬರ್ 04, ಮಂಗಳವಾರ ಬೆಳ್ಳೆ ಗೀತಾ ಮಂದಿರದಲ್ಲಿ ವೇದಮೂರ್ತಿ ಬಿ ಗಣೇಶ್ ಭಟ್ ಇವರ ನೇತೃತ್ವದಲ್ಲಿ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ-ಶ್ರೀ ಶಾರದಾ ಪೂಜೆ, ಮಹಾ ಚಂಡಿಕಾಯಾಗ ನಡೆಯಲಿದೆ.
ಅಂದು ಬೆಳಿಗ್ಗೆ 8 ಗಂಟೆಗೆ ಪ್ರಾರ್ಥನೆ ಬೆಳಿಗ್ಗೆ 11.30ಕ್ಕೆ ಮಹಾಪೂಜೆ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ವಿಶ್ವಹಿಂದೂಪರಿಷತ್ ನ ಶಿರ್ವ ವಲಯದ ಅಧ್ಯಕ್ಷರಾದ ವಿಖ್ಯಾತ ಭಟ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.