ಕಾಪು : ಶ್ರೀ ಸಾಯಿ ಈಶ್ವರ್ ಗುರೂಜಿ ದಿವ್ಯ ಸಂಕಲ್ಪದಲ್ಲಿ ದುರ್ಗಾಷ್ಟಮಿಯ ಪ್ರಯುಕ್ತ ದ್ವಾರಕಾಮಾಯಿ ಮಠ ಉಡುಪಿ ಜಿಲ್ಲೆಯ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ,ಶಂಕರಪುರ ಇಲ್ಲಿ ಶ್ರೀ ಸೌಭಾಗ್ಯ ಹೆಣ್ಣಿನ ಭಾಗ್ಯೋದಯದ ಬೆಳಕು ಎಂಬ ಕಾರ್ಯಕ್ರಮದ ಅಂಗವಾಗಿ ಅಕ್ಟೋಬರ್ 03, ಸೋಮವಾರ ಬೆಳಿಗ್ಗೆ 9:30 ರಿಂದ 7 ವರ್ಷದಿಂದ 19 ವರ್ಷದ ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿ ಧಾರಣೆ ಕಾರ್ಯಕ್ರಮ ಜರಗಲಿದೆ.
ಮೊದಲೇ ಹೆಸರು ನೊಂದಾವಣಿ ಮಾಡಿಕೊಂಡವರಿಗೆ ಮಾತ್ರ ಈ ಅವಕಾಶವಿದೆ.
ಮೂಗುತಿ ಧಾರಣೆಯ ಬಗ್ಗೆ :ಶ್ರೀ ಸಾಯಿ ಈಶ್ವರ್ ಗುರೂಜಿ ಸಂಕಲ್ಪದಲ್ಲಿ ನವರಾತ್ರಿಯ ಪರ್ವ ಕಾಲದಲ್ಲಿ ಹೆಣ್ಣು ಮಕ್ಕಳ ಸೌಭಾಗ್ಯಕ್ಕಾಗಿ ಉಚಿತ ಮೂಗುತಿ ಧಾರಣೆಯು ಹೆಣ್ಣುಗಳ ಭಾಗ್ಯಕ್ಕೆ, ಮಕ್ಕಳ ಕೋಪ, ಹಠ, ಚಂಚಲತೆ ನಿಗ್ರಹಿಸುತ್ತದೆ ಈ ಸುಂದರ ಮೂಗುತಿ. ಹಿಂದೂ ಸಂಪ್ರದಾಯದಲ್ಲಿ ಮೂಗುತಿಗೆ ವಿಶೇಷ ಮಹತ್ವವನ್ನು ಕೊಡಲಾಗುತ್ತದೆ. ಹಿಂದೂ ಸಂಪ್ರದಾಯದ ಪ್ರಕಾರ ಸ್ತ್ರೀಯರಿಗೆ ಮಾತ್ರ ಮೂಗುತಿ ಹಾಕಲು ಹೇಳಿರುವುದರ ಹಿಂದೆಯೂ ಶಾಸ್ತ್ರವಿದೆ. ಸ್ತ್ರೀಯರ ಮನಸ್ಸು ಚಂಚಲವಾಗಿರುತ್ತದೆ ಆದ್ದರಿಂದ ಮೂಗುತಿ ಧರಿಸುವುದರಿಂದ ಸ್ತ್ರೀಯರ ಚಂದ್ರನಾಡಿ ಕಾರ್ಯ ನಿರತವಾಗಿ ಮನಸ್ಸು ಸ್ಥಿರವಾಗುತ್ತದೆ. ಕುದುರೆಗೆ ಮೂಗಿಗೆ ದಾರ ಹಾಕಿ ನಿಯಂತ್ರಿಸುವುದನ್ನು ನೋಡಿರಬಹುದು. ಅದೇ ರೀತಿಯಲ್ಲಿಯೇ ಮೂಗುತ್ತಿ ಕೂಡ ಹೆಣ್ಣಿನ ಕೋಪ, ಹಠ, ಚಂಚಲತೆಯನ್ನು ನಿಗ್ರಹಿಸುತ್ತದೆ. ಮೂಗುತಿ ಮಹಿಳೆಯರ ಶ್ವಾಸಮಾರ್ಗವನ್ನು ರಕ್ಷಿಸುತ್ತದೆ. ಮೂಗುತಿಯಲ್ಲಿರುವ ಸಾತ್ತ್ವಿಕತೆ ಮತ್ತು ಚೈತನ್ಯದಿಂದ ಮೂಗಿನ ಚೈತನ್ಯದ ವಲಯವು ನಿರ್ಮಾಣವಾಗುತ್ತದೆ. ಮೂಗಿನ ಸುತ್ತಲಿನ ವಾಯು ಮಂಡಲವೂ ಶುದ್ಧವಾಗುತ್ತದೆ. ಇದರಿಂದ ಶ್ವಾಸಮಾರ್ಗದಿಂದ ಶುದ್ಧಗಾಳಿಯು ದೇಹ ಪ್ರವೇಶಿಸಲು ಸುಲಭವಾಗುತ್ತದೆ. ಸಾಮಾನ್ಯವಾಗಿ ಮಹಿಳೆಯರು ಮೂಗುತಿಯನ್ನು ಮೂಗಿನ ಎಡಭಾಗಕ್ಕೆ ಹಾಕಿಕೊಳ್ಳುತ್ತಾರೆ. ಇದಕ್ಕೆ ಕಾರಣ, ಮಹಿಳೆಯರ ಗರ್ಭಕೋಶ ಮತ್ತಿತರ ಜನನಾಗಂಗಳಿಗೆ ಸಂಬಂಧಿಸಿದ ನರವು ಮೂಗಿನ ಎಡ ಭಾಗದೊಂದಿಗೆ ಸಂಬಂಧ ಹೊಂದಿರುತ್ತದೆ. ಇದೇ ಕಾರಣದಿಂದಾಗಿ ಮೂಗುತಿಯನ್ನು ಎಡಭಾಗಕ್ಕೆ ಹಾಕಿಕೊಳ್ಳುತ್ತಾರೆ. ಜೊತೆಗೆ ಇದು ಮಹಿಳೆಯರ ಹೆರಿಗೆ ಸಮಯದಲ್ಲಿ ಅವರ ನೋವನ್ನು ಕಡಿಮೆ ಮಾಡಲು ಕೂಡ ತುಂಬಾ ಸಹಾಯ ಮಾಡುತ್ತದೆ. ಹೀಗಾಗಿ ಮಹಿಳೆಯರಿಗೆ ಮೂಗುತಿ ಅವರ ಅಂದದ ಜೊತೆಗೆ ಆರೋಗ್ಯವನ್ನು ಹೆಚ್ಚಿಸುತ್ತದೆ. ಇತ್ತೀಚಿನ ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ಹೆಣ್ಣು ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ. ಗಂಡ ಹೆಂಡತಿ ನಡುವೆ ಹೊಂದಾಣಿಕೆ ಇಲ್ಲದೆ ವಿಚ್ಚೇದನೆ ಹಾಗೂ ಬಂಜೆತನ ಹೆಚ್ಚಾಗುತ್ತಿರುವುದನ್ನು ಅರಿತುಕೊಂಡ ಶ್ರೀ ಸಾಯಿ ಈಶ್ವರ್, ಹೆಣ್ಣು ಮಕ್ಕಳು ಈ ದೇಶದ ಆಸ್ತಿ ಮತ್ತು ಅವರ ಜೀವನವು ಸುಖಮಯವಾಗಿರಬೇಕೆಂದು ದ್ವಾರಕಾಮಾಯಿ ಮಠ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಪ್ರತಿವರ್ಷ ನವರಾತ್ರಿಯ ದುರ್ಗಾಷ್ಟಮಿಯಂದು ನೂರಾರು ಹೆಣ್ಣು ಮಕ್ಕಳಿಗೆ ಉಚಿತ ಚಿನ್ನದ ಮೂಗುತಿಯನ್ನು ಚುಚ್ಚುವ ಪುಣ್ಯ ಸೇವೆಯನ್ನು ನಡೆಸುತ್ತ ಬರುತ್ತಿದ್ದರೆ ಹೆಣ್ಣು ಮಕ್ಕಳು ದರಿಸುವ ಮೂಗುತಿಯ ಮಹತ್ವವನ್ನು ಸಾರುವುದರೊಂದಿಗೆ ನಮ್ಮ ದೇಶದ ಎಲ್ಲಾ ಹೆಣ್ಣು ಮಕ್ಕಳಿಗೂ ಈ ಸೇವೆಯನ್ನು ಮುಂದುವರಿಸುವ ಸಂಕಲ್ಪವನ್ನು ಮಾಡಿರುತ್ತಾರೆ. ಈ ಪುಣ್ಯ ಸೇವೆಯಲ್ಲಿ ತಾವು ಕೈ ಜೋಡಿಸಿ ಪೋತ್ಸಾಹಿಸಿ ಎಂದು ಶ್ರೀ ಸಾಯಿ ಈಶ್ವರ್ ಗುರೂಜಿ ದಾನಿಗಳಲ್ಲಿ ಮನವಿ ಮಾಡಿರುತ್ತಾರೆ.