ಕಾಪು : ಕೊಪ್ಪಲಂಗಡಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿ - ಸಾವು
Posted On:
27-09-2022 10:33AM
ಕಾಪು : ಇಲ್ಲಿನ ಕೊಪ್ಪಲಂಗಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಸೋಮವಾರ ರಾತ್ರಿ ಸಂಭವಿಸಿದೆ.
ಮೃತ್ತ ವ್ಯಕ್ತಿಯನ್ನು ಕೊಪ್ಪಲಂಗಡಿ ನಿವಾಸಿ 48 ವರ್ಷದ ಕಿಶೋರ್ ಶೆಟ್ಟಿ ಎಂದು ಗುರುತಿಸಲಾಗಿದೆ.
ಅವರು ತನ್ನ ಮನೆ ಕಡೆ ಬರಲು ರಸ್ತೆ ಪಕ್ಕ ನಿಂತಿದ್ದಾಗ ಉಡುಪಿ ಕಡೆಯಿಂದ ಪಡುಬಿದ್ರಿ ಕಡೆ ಸಾಗುತ್ತಿದ್ದ ಇನ್ನ ಗ್ರಾಮದ ನಿವಾಸಿ ಶ್ರೇಯಸ್ ಅವರ ಬೈಕ್ ಡಿಕ್ಕಿ ಹೊಡೆದಿದೆ.
ಅಪಘಾತದ ತೀವ್ರತೆಗೆ ಕಿಶೋರ್ ಶೆಟ್ಟಿ, ಮೃತಪಟ್ಟರೆ, ಶ್ರೇಯಸ್ ತೀವ್ರ ಗಾಯಗೊಂಡು ಉಡುಪಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಾಪು ಠಾಣಾಧಿಕಾರಿ ಶ್ರೀಶೈಲ ಮುರುಗೋಡ ಮತ್ತು ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದರು.