ಪಡುಬಿದ್ರಿ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾದ ಟಿಪ್ಪರ್
Posted On:
09-10-2022 02:34PM
ಪಡುಬಿದ್ರಿ : ಇಲ್ಲಿನ ಬೀಡಿನ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಮುದ್ರ ತಡೆಗೋಡೆ ಗೆ ಬಳಸುವ ಕಲ್ಲುಗಳನ್ನು ಹೇರಿಕೊಂಡು ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಟಿಪ್ಪರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಅಡ್ಡಲಾಗಿ ಬಿದ್ದ ಘಟನೆ ರವಿವಾರ ಮಧ್ಯಾಹ್ನ ಸಂಭವಿಸಿದೆ.
ಹೆದ್ದಾರಿಯಲ್ಲಿ ಹೆಚ್ಚಿನ ವಾಹನಗಳು ಚಲಿಸದೆ ಇದ್ದ ಕಾರಣ ಹೆಚ್ಚಿನ ಪ್ರಮಾಣದಲ್ಲಿ ಅವಘಡ ಸಂಭವಿಸುವುದು ತಪ್ಪಿದೆ.
ಅವಘಡದಲ್ಲಿ ಟಿಪ್ಪರ್ ಚಾಲಕ ಅಲ್ಪ ಸ್ವಲ್ಪ ಗಾಯಗಳಿಂದ ಪಾರಾಗಿದ್ದಾನೆ. ಸ್ಥಳೀಯರು ಚಾಲಕನನ್ನು ಉಪಚರಿಸಿ ಆಸ್ಪತ್ರೆಗೆ ಕಳುಹಿಸಿದ್ದಾರೆ.