ಉಚ್ಚಿಲ : ಮಹಾಲಕ್ಷ್ಮಿ ವಿದ್ಯಾಸಂಸ್ಥೆ ಸಭಾಭವನದಲ್ಲಿ ನಡೆದ ದಕ್ಷಿಣ ಕನ್ನಡ ಮೊಗವೀರ ಹಿತಸಾಧನ ವೇದಿಕೆ ವತಿಯಿಂದ ಪ್ರತಿವರ್ಷದಂತೆ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ರವಿವಾರ ಜರಗಿತು.
ಈ ಸಂದರ್ಭ ಶಾಸಕರಾದ ಲಾಲಾಜಿ ಆರ್ ಮೆಂಡನ್ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ದ. ಕ ಮೊಗವೀರ ಹಿತಸಾಧನ ವೇದಿಕೆ ಅಧ್ಯಕ್ಷ ಸರ್ವೋತ್ತಮ ಕುಂದರ್ ಅಧ್ಯಕ್ಷತೆ ವಹಿಸಿದ್ದರು.
ಉದ್ಯಮಿಗಳಾದ ಹರಿಯಪ್ಪ ಕೋಟ್ಯಾನ್, ಮೋಹನ್ ಬೆಂಗ್ರೆ, ವಿನೀತ್ ಅಮೀನ್, ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಮುಖ್ಯೋಪಾಧ್ಯಾಯ ಪೀಟರ್ ಜೋಸೆಫ್, ವಿಶ್ವನಾಥ್ ಕುರಾಡಿ, ಸುಧಾಕರ್ ಕರ್ಕೇರ, ಸತೀಶ್ ಆರ್ ಸಾಲ್ಯಾನ್, ರವಿ ಕುಂದರ್, ವೇದವ್ಯಾಸ ಬಂಗೇರ ಹಾಗೂ ಮೊಗವೀರ ಹಿತಸಾಧನ ವೇದಿಕೆ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಉಚ್ಚಿಲ ಮಹಾಲಕ್ಷ್ಮಿ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕ ಗಂಗಾಧರ ಕರ್ಕೇರ ಸ್ವಾಗತಿಸಿದರು. ಪುಷ್ಪರಾಜ್ ಕೋಟ್ಯಾನ್ ವಂದಿಸಿದರು. ಲಕ್ಷ್ಮಣ್ ಮೈಂದನ್ ಕಾರ್ಯಕ್ರಮ ನಿರೂಪಿಸಿದರು.