ಕಾಪು : ಶಬರಿಮಲೆ ಅಯ್ಯಪ್ಪ ಸೇವಾ ಸಮಾಜ ತಾಲೂಕು ಘಟಕದ ಅಧ್ಯಕ್ಷರಾಗಿ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಆಯ್ಕೆ
Posted On:
09-10-2022 06:20PM
ಕಾಪು : ಶ್ರೀ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಇದರ ಕಾಪು ತಾಲ್ಲೂಕು ಘಟಕದ ನೂತನ ಪದಾಧಿಕಾರಿಗಳ ಆಯ್ಕೆಯ ಸಭೆಯು ಎರ್ಮಾಳು ಪೂಂದಾಡು ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಸಾಸ್ ನ ಉಡುಪಿ ಜಿಲ್ಲಾ ಅಧ್ಯಕ್ಷರಾದ ರಾಧಾಕೃಷ್ಣ ಮೆಂಡನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಈ ಸಾಲಿಗೆ ನೂತನ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ ಕೊಪ್ಪಲಂಗಡಿ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಗೌರವ ಅಧ್ಯಕ್ಷರಾಗಿ ಸುರೇಶ್ ಶೆಟ್ಟಿ ಗುರ್ಮೆ, ಮೋಹನ್ ಬಂಗೇರ ಕಾಪು, ಲೀಲಾಧರ ಶೆಟ್ಟಿ ಕರಂದಾಡಿ, ಗೌರವ ಸಲಹೆಗಾರರಾಗಿ ವಿನಯ ಕುಮಾರ ಶೆಟ್ಟಿ ಎಲ್ಲದಡಿ ಎರ್ಮಾಳು, ನಾರಾಯಣ ಗುರುಸ್ವಾಮಿ ಕಾಪು ಪ್ರಧಾನ ಕಾರ್ಯದರ್ಶಿಯಾಗಿ ದಿವಾಕರ್ ಶೆಟ್ಟಿ ಸಂಘಟನಾ ಕಾರ್ಯದರ್ಶಿಯಾಗಿ ಶ್ರೀಧರ್ ಶೆಟ್ಟಿಗಾರ್ ಕರಂದಾಡಿ ಕೋಶಾಧಿಕಾರಿಯಾಗಿ ಜಿತೇಶ್ ಶೆಟ್ಟಿ ಮಜೂರು, ಉಪಾಧ್ಯಕ್ಷರಾಗಿ ಜಯ ಎರ್ಮಾಳು, ಶಂಕರ ಗಿರಿನಗರ ಕಾರ್ಯದರ್ಶಿಯಾಗಿ ಧನಂಜಯ ಮಲ್ಲಾರು, ನಾಗೇಶ್ ಮಲ್ಲಾರು ಭಜನಾ ಸಹ ಸಂಚಾಲಕರಾಗಿ ಸುರೇಶ್ ಅದಮಾರು ಆಯ್ಕೆಯಾದರು.
ಸಾಸ್ ಉಡುಪಿ ಜಿಲ್ಲಾ ಅಧ್ಯಕ್ಷರಾದ ರಾಧಾಕೃಷ್ಣ ಮೆಂಡನ್, ಪ್ರಧಾನ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಸುಂದರ ಗುರುಸ್ವಾಮಿ ನಿಟ್ಟೂರು, ವಿನಯಕುಮಾರ್ ಶೆಟ್ಟಿ ಎಲ್ಲದಡಿ ಎರ್ಮಾಳು, ಮೋಹನ ಬಂಗೇರ ಕಾಪು ಮತ್ತಿತರರು ಉಪಸ್ಥಿತರಿದ್ದರು
ದಿವಾಕರ ಶೆಟ್ಟಿ ಅವರು ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು, ರಂಜಿತ್ ಶೆಟ್ಟಿ ವಂದಿಸಿದರು.