ಶಿರ್ವ: ಪಿಕಪ್ ವಾಹನ ಡಿಕ್ಕಿ- ಪಾದಾಚಾರಿ ಮೃತ್ಯು
Posted On:
10-10-2022 11:48AM
ಶಿರ್ವ : ಪಿಕಪ್ ವಾಹನ ಡಿಕ್ಕಿ ಹೊಡೆದು ಪಾದಾಚಾರಿಯೊಬ್ಬರು ಮೃತಪಟ್ಟ ಘಟನೆ ಶಿರ್ವದ ಮುಖ್ಯ ರಸ್ತೆಯ ನ್ಯಾರ್ಮ ಸೇತುವೆ ಬಳಿ ರವಿವಾರ ರಾತ್ರಿ ನಡೆದಿದೆ.
ಮೃತ ಪಾದಚಾರಿಯನ್ನು ಎವುಜಿನ್ ಬ್ರಿಟ್ಟೊ(50) ಎಂದು ಗುರುತಿಸಲಾಗಿದೆ.
ಎವುಜಿನ್ ಬ್ರಿಟ್ಟೊ ಅವರು ಶಿರ್ವ ಪೇಟೆಯಿಂದ ಮನೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಟಪಾಡಿ ಕಡೆಯಿಂದ ಬಂದ ಪಿಕಪ್ ವಾಹನ ಅವರಿಗೆ ಡಿಕ್ಕಿ ಹೊಡೆದಿದೆ.ಪರಿಣಾಮ ತಲೆಗೆ ಗಂಭೀರ ಗಾಯಗೊಂಡ ಅವರನ್ನು ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದರೂ ಆಸ್ಪತ್ರೆಯಲ್ಲಿ ಅವರನ್ನು ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.