ಮೂಳೂರು : ಎಸ್ಡಿಪಿಐಯಿಂದ ಆಂಬುಲೆನ್ಸ್ ಲೋಕಾರ್ಪಣೆ ; ಪಕ್ಷ ಸೇರ್ಪಡೆ ಕಾರ್ಯಕ್ರಮ
Posted On:
10-10-2022 12:14PM
ಮೂಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕಾಪು ಕ್ಷೇತ್ರ ಮೂಳೂರು ವಲಯ ಇದರ ವತಿಯಿಂದ ಅಂಬುಲೆನ್ಸ್ ಹಸ್ತಾಂತರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ಅಕ್ಟೋಬರ್ 9 ರಂದು ಕಾಪು ತಾಲೂಕಿನ ಮೂಳೂರಿನಲ್ಲಿ ಜರಗಿತು.
ಪಕ್ಷದ ಸಮಾಜಸೇವೆಯನ್ನು ಗುರುತಿಸಿಕೊಂಡು ದಾನಿಗಳು ಜಾತಿ-ಮತ ಭೇದವಿಲ್ಲದೆ ಸಾರ್ವಜನಿಕರ ಸೇವೆಗಾಗಿ ಆಂಬುಲೆನ್ಸ್ ನ್ನು ಎಸ್ಡಿಪಿಐ ಮೂಳೂರು ವಲಯಕ್ಕೆ ಹಸ್ತಾಂತರಿಸಲಾಯಿತು.
ಸಾರ್ವಜನಿಕ ಸೇವೆಗಾಗಿ ನೀಡಿದ
ಆಂಬುಲೆನ್ಸ್ ಉದ್ಘಾಟನೆಯನ್ನು ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರು ಹಾಗೂ ಎಸ್ಡಿಪಿಐ ಉಡುಪಿ ಜಿಲ್ಲಾ ಉಸ್ತುವಾರಿಯಾದ ಅಥಾವುಲ್ಲಾ ಜೋಕಟ್ಟೆ ನೆರವೇರಿಸಿದರು.
ತದನಂತರ ಪಕ್ಷದ ತತ್ವ ಸಿದ್ಧಾಂತವನ್ನು ಒಪ್ಪಿಕೊಂಡ 30 ಕ್ಕೂ ಅಧಿಕ ಜನರನ್ನು ಪಕ್ಷಕ್ಕೆ ಸೇರ್ಪಡೆ ಮಾಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರೀಫ್ ಹಸನಬ್ಬ ವಹಿಸಿದ್ದರು .ಮುಖ್ಯ ಅತಿಥಿಯಾಗಿ ಎಸ್ಡಿಪಿಐ ಉಡುಪಿ ಜಿಲ್ಲಾ ಅಧ್ಯಕ್ಷರಾದ ಶಾಹಿದ್ ಆಲಿ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಅಶ್ರಫ್ ಬಾವ, ಪಕ್ಷದ ಕಾರ್ಯಕರ್ತರು ಮತ್ತಿತರರು ಉಪಸ್ಥಿತರಿದ್ದರು.