ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ ಪೂರ್ಣಾಹುತಿ ; ಅನ್ನಸಂತರ್ಪಣೆ

Posted On: 11-10-2022 07:07PM

ಕಾಪು : ಇಲ್ಲಿನ ಗೌಡ ಸಾರಸ್ವತ ಸಮಾಜದ ಆಡಳಿತಕ್ಕೆ ಒಳಪಟ್ಟಿರುವ ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಅಕ್ಟೋಬರ್ 11ರಂದು ಚಂಡಿಕಾಯಾಗ ಪೂರ್ಣಾಹುತಿ ಮತ್ತು ಅನ್ನಸಂತರ್ಪಣೆ ನಡೆಯಿತು.

ಹಳೇ ಮಾರಿಗುಡಿಯ ಅರ್ಚಕ ವೇ| ಮೂ| ಕಮಲಾಕ್ಷ ಭಟ್ ಅವರ ನೇತೃತ್ವದಲ್ಲಿ ವೈದಿಕ ವೃಂದದ ಸಹಭಾಗಿತ್ವದೊಂದಿಗೆ ಚಂಡಿಕಾಯಾಗ ಪೂರ್ಣಾಹುತಿಯ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು. ಬಳಿಕ ಹಾಲು ಪಾಯಸ ಸಹಿತವಾಗಿ ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ಮಾರಿಯಮ್ಮ ದೇವಿಯ ದರ್ಶನ ಸೇವೆ ನಡೆದು ಭಕ್ತರಿಗೆ ಅನುಗ್ರಹ ಪ್ರಸಾದ ವಿತರಿಸಲಾಯಿತು.

ಕಾಪು ಹಳೇ ಮಾರಿಗುಡಿ ದೇವಸ್ಥಾನದ ಆಡಳಿತ ಮೊಕ್ತೇಸರ ಅಧ್ಯಕ್ಷ ಕೆ. ಪ್ರಸಾದ್ ಗೋಕುಲ್‌ದಾಸ್ ಶೆಣೈ, ಮಾಜಿ ಆಡಳಿತ ಮೊಕ್ತೇಸರ ಶ್ರೀಧರ ಆನಂದರಾಯ ಶೆಣೈ, ಮೊಕ್ತೇಸರರಾದ ಸದಾಶಿವ ರಾಧಾಕೃಷ್ಣ ಕಾಮತ್, ರಾಜೇಶ್ ಮಾಧವರಾಯ ಶೆಣೈ, ರಾಮ ಶಶಿಧರ ನಾಯಕ್, ಶ್ರೀಕಾಂತ ಲಕ್ಷ್ಮೀನಾರಾಯಣ ಭಟ್, ಆಡಳಿತ ಮಂಡಳಿಯ ಸದಸ್ಯರಾದ ಸುನೀಲ್ ಪೈ, ಚಂದ್ರಕಾಂತ್ ಕಾಮತ್, ಮೋಹನದಾಸ್ ಕಿಣಿ, ಕೃಷ್ಣಾನಂದ ನಾಯಕ್, ರಾಜೇಶ್ ಶೆಣೈ ಹಾಗೂ ವಿವಿಧ ಗಣ್ಯರು, ಕಾಪು ಪೇಟೆಯ ಹತ್ತು ಸಮಸ್ತರು ಮತ್ತು ಭಕ್ತಾಧಿಗಳು ಉಪಸ್ಥಿತರಿದ್ದರು.