ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ತಾಲೂಕು ವಿದ್ಯುತ್ ಗುತ್ತಿಗೆದಾರರ ಸಂಘಕ್ಕೆ ರವೀಂದ್ರ ಪೂಜಾರಿ ಮರು ಆಯ್ಕೆ

Posted On: 12-10-2022 06:17PM

ಕಾಪು : ಕರ್ನಾಟಕ ರಾಜ್ಯದ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ (ರಿ.) ಬೆಂಗಳೂರು, ಇದರ ಕಾಪು ತಾಲೂಕಿನ ಮಹಾ ಸಭೆಯು ಕಾಪು ಹೋಟೆಲ್ ಮಂದಾರದಲ್ಲಿ ನಡೆಯಿತು.

ಸಭಾ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಲ್ಲಿ ಸಂಘವನ್ನು ಹುಟ್ಟು ಹಾಕಿ, ಸ್ಥಾಪಕ ಅಧ್ಯಕ್ಷರಾಗಿ ದೀರ್ಘ ಕಾಲ ಸೇವೆ ಸಲ್ಲಿಸಿದ ನಿಕಟಪೂರ್ವ ಜಿಲ್ಲಾ ಅಧ್ಯಕ್ಷರಾದ ನಾಗರಾಜ್ ರಾವ್ ಎಮ್. ರವರನ್ನು ಕಾಪು ತಾಲೂಕು ಸಮಿತಿಯಿಂದ ಸನ್ಮಾನಿಸಲಾಯಿತು. ಮುಂದಿನ ಮೂರು ವರ್ಷದ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಜಿಲ್ಲೆಯ ಮೇಲುಸ್ತುವಾರಿಯೊಂದಿಗೆ ಚುನಾವಣೆ ನಡೆದು, ಚುನಾವಣಾ ಪ್ರಕ್ರಿಯೆಯಲ್ಲಿ ಮಹಾದೇವಿ ಎಲೆಕ್ಟ್ರಿಕಲ್ಸ್ ನ ರವೀಂದ್ರ ಪೂಜಾರಿ ಯವರು ಮರು ಆಯ್ಕೆಯಾಗಿರುತ್ತಾರೆ ಎಂದು ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷರಾದ ಶ್ರೀಕಾಂತ್ ಶೆಣೈರವರು ಘೋಷಿಸಿದರು. ಉಪಾಧ್ಯಕ್ಷರಾಗಿ ವಸಂತ ಸುವರ್ಣ, ಕಾರ್ಯದರ್ಶಿಯಾಗಿ ಗಿರಿಧರ್, ಜತೆ ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ, ಕೋಶಾಧಿಕಾರಿಯಾಗಿ ಮುಹಮ್ಮದ್ ಆಝಮ್ ರವರು ಅವಿರೋಧವಾಗಿ ಆಯ್ಕೆಯಾಗಿರುವರು ಎಂದು ತಿಳಿಸಿದರು. ಜಿಲ್ಲಾ ಮಟ್ಟದ ಸಂಘದ ಪ್ರಚಾರ ಸಭೆಯ ಅಧ್ಯಕ್ಷರಾಗಿ ಅನ್ವರ್ ಅಲಿ ಕಾಪು ರವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಅಧ್ಯಕ್ಷರಾದ ಶ್ರೀಕಾಂತ್ ಶೆಣೈ , ಉಪಾಧ್ಯಕ್ಷರು ಗಳಾದ ಅಶೋಕ್ ಸುವರ್ಣ , ಕೃಷ್ಣ ಕುಲಾಲ್, ಕಾರ್ಯದರ್ಶಿ ಸುರೇಶ್ ಜತ್ತನ್ನ , ಕೋಶಾಧಿಕಾರಿ ಆನಂದ ಶೇರಿಗಾರ, ಸಂಘಟನಾ ಕಾರ್ಯದರ್ಶಿ ಸುದರ್ಶನ್ ರವರು ಭಾಗವಹಿಸಿದ್ದರು.

ಸಭಾಧ್ಯಕ್ಷತೆಯನ್ನು ರವೀಂದ ಪೂಜಾರಿ ವಹಿಸಿದ್ದರು. ಸುಪ್ರೀತ್ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ಹೇಮಂತ್ ಪಡುಬಿದ್ರಿ ಸ್ವಾಗತಿಸಿದರು. ಕಾರ್ಯದರ್ಶಿ ದೇವರಾಜ ಕೋಟ್ಯಾನ್ ವರದಿ ವಾಚಿಸಿದರು. ಕೋಶಾಧಿಕಾರಿ ಮೋಹನ ಆಚಾರ್ಯ ಲೆಕ್ಕ ಪತ್ರ ಮಂಡಿಸಿದರು. ಕಾರ್ಯಕ್ರಮವನ್ನು ಅನ್ವರ್ ಅಲಿ ಕಾಪು ಮತ್ತು ಪ್ರಕಾಶ್ ಅಂಚನ್ ನಿರೂಪಿಸಿದರು. ಸಂಘಟನಾ ಕಾರ್ಯದರ್ಶಿ ಮುಹಮ್ಮದ್ ವಂದಿಸಿದರು.