ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು ಬೀಚ್ ನ ನೂತನ ಸಿಬ್ಬಂದಿ ಕಚೇರಿ ಉದ್ಘಾಟನೆ

Posted On: 16-10-2022 12:55PM

ಕಾಪು : ಇಲ್ಲಿನ ಬೀಚ್ ನಿರ್ವಹಣಾ ಸಮಿತಿ ಹಾಗೂ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಕಾಪು ಬೀಚ್ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಬೀಚ್ ಸಿಬ್ಬಂದಿ ಕಚೇರಿಯನ್ನು ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ನಿತಿನ್ ಕುಮಾರ್, ಅನಿಲ್ ಕುಮಾರ್, ನವೀನ್ ಅಮೀನ್, ಲಾಲ್ ಬಹಾದ್ದೂರ್ ಶಾಸ್ತ್ರೀ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್ ಅಧ್ಯಕ್ಷ ಶೀಲಾರಾಜ್ ಪುತ್ರನ್, ಕಾಪು ಮೊಗವೀರ ಮಹಾಸಭಾ ಮಾಜಿ ಅಧ್ಯಕ್ಷ ಮೋಹನ್ ಬಂಗೇರ ಸ್ಥಳೀಯ ಮುಖಂಡರಾದ ಪ್ರವೀಣ್ ಪೂಜಾರಿ, ಆನಂದ್ ಶ್ರೀಯಾನ್, ಸಂತೋಷ್ ಶ್ರೀಯಾನ್, ಉದ್ಯಮಿ ಮಹಮ್ಮದ್ ಆಲಿ ಹಾಗೂ ಬೀಚ್ ಸಿಬ್ಬಂದಿಗಳು, ಸ್ಥಳೀಯರು ಉಪಸ್ಥಿತರಿದ್ದರು.