ಕಾಪು : ರಾಷ್ಟ್ರೀಯ ಹೆದ್ದಾರಿಯ ಹತ್ತು ಕಿಲೋಮೀಟರ್ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಕಾನೂನು ಬಾಹಿರ ಎಂದು ಸಂಸತ್ತಿನಲ್ಲಿ ಘೋಷಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಮೂರು ತಿಂಗಳೊಳಗೆ ಸುರತ್ಕಲ್ ಟೋಲ್ ಗೇಟ್ ಮುಚ್ಚಿಸುವುದಾಗಿ ಆಶ್ವಾಸನೆ ನೀಡಿದರೂ, ನಿರಂತರವಾಗಿ ಕಾರ್ಯನಿರ್ವಹಿಸುತ್ತದೆ ರಾಜ್ಯದಲ್ಲಿ 18 ಇಂತಹ ಅಕ್ರಮ ಟೋಲ್ಗಳಿದ್ದು ಸುರತ್ಕಲ್ ಟೋಲ್ ಗೇಟ್ ಇದರಲ್ಲಿ ಸೇರಿದೆ.
ಅಕ್ಟೋಬರ್ 18ರಂದು ಟೋಲ್ ತೆರವು ಮಾಡಲು ಹೋರಾಟ ಸಮಿತಿ ನಿರ್ಧರಿಸಿದ್ದು ಕಳೆದ ಆರು ವರ್ಷಗಳಲ್ಲಿ ಟೋಲ್ ಗೇಟ್ ತೆರವಿನ ಹಲವು ಭರವಸೆಗಳು ನೀಡಲಾಗಿದೆ.
ಕಳೆದ ಆರು ತಿಂಗಳಲ್ಲಿ ಸರಕಾರದ ಹಲವು ವೇದಿಕೆ,ಮತ್ತು ವಿಧಾನಸಭೆಯಲ್ಲೂ ತಿಂಗಳೊಳಗೆ ಟೋಲ್ ಗೇಟ್ ತೆರವು ಎಂಬ ಹೇಳಿಕೆಗಳು ಹೊರಬಿದ್ದಿದೆ ಅವು ಯಾವುದೇ ಜಾರಿಗೆ ಬರಲಿಲ್ಲ. ಈಗಿನ ಭರವಸೆಯು ಜಾರಿಗೆ ಬರುತ್ತದೆ ಎಂಬ ವಿಶ್ವಾಸ ಜನತೆಗಿಲ್ಲ ಸುಂಕ ಸಂಗ್ರಹ ಸ್ಥಗಿತಗೊಳ್ಳದೆ ಹೋರಾಟ ನಿಲ್ಲುವುದಿಲ್ಲ. ಅಕ್ಟೋಬರ್ 18ರಂದು ಟೋಲ್ ತೆರವು ಹೋರಾಟಕ್ಕೆ ಉಡುಪಿ ಜಿಲ್ಲೆಯ ಜನತಾದಳ (ಜಾತ್ಯತೀತ) ಪಕ್ಷದ ಸಂಪೂರ್ಣ ಬೆಂಬಲವಿದೆಯೆಂದು ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೇಶ್ ವಿ ಶೆಟ್ಟಿ, ರಾಜ್ಯ ಕಾರ್ಯದರ್ಶಿಯಾದ ಸುಧಾಕರ ಶೆಟ್ಟಿ ಹೆಜಮಾಡಿ ಮತ್ತು ಜೆಡಿಎಸ್ ಉಡುಪಿ ಜಿಲ್ಲಾ ಕಾರ್ಯದರ್ಶಿ ಜಯರಾಮ ಆಚಾರ್ಯಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.