ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಬೆಳ್ಮಣ್ : ಉದ್ಯೋಗ ರತ್ನ ಪ್ರಶಸ್ತಿ ಪುರಸ್ಕೃತರಾದ ಸುಧಾಕರ ಪೂಜಾರಿ

Posted On: 18-10-2022 10:53AM

ಬೆಳ್ಮಣ್ : ಜೇಸಿಐ ಇಂಡಿಯ ವಲಯದ ಪಂಚರತ್ನ ಪ್ರಶಸ್ತಿಗಳಲ್ಲಿ ಒಂದಾದ ಉದ್ಯೋಗ ರತ್ನ - 2022 ಪ್ರಶಸ್ತಿಯನ್ನು ಅಕ್ಟೋಬರ್ 16ರಂದು ಬೆಳ್ಮಣ್ ನಲ್ಲಿ ಜರಗಿದ ವಲಯ 15ರ ವ್ಯವಹಾರ ಸಮ್ಮೇಳನ 'ಸಂಚಲನ' ಸಾಧಕರ ಸಮಾಗಮ ಕಾರ್ಯಕ್ರಮದಲ್ಲಿ ವೃತ್ತಿ ಕ್ಷೇತ್ರದ ಸಾಧನೆ ಪರಿಗಣಿಸಿ ಜೆಸಿಐ ಶಂಕರಪುರ ಜಾಸ್ಮಿನ್ ನ ಸುಧಾಕರ ಪೂಜಾರಿಯವರಿಗೆ ಉದ್ಯೋಗ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜೆಸಿಐ ಶಂಕರಪುರ ಜಾಸ್ಮಿನ್ ಘಟಕದ ಮೂಲಕ 2007ರಲ್ಲಿ ಜೆಸಿಐ ಅಂದೋಲನಕ್ಕೆ ಪಾದಾರ್ಪಣೆ ಮಾಡಿದ ಇವರು ಘಟಕದಲ್ಲಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿ 2018ರಲ್ಲಿ ಘಟಕಾಧ್ಯಕ್ಷರಾಗಿ ಹಲವಾರು ಜನಪರ ಕಾರ್ಯಕ್ರಮಗಳನ್ನು ಮಾಡುವುದರ ಮೂಲಕ ವಲಯಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಇನ್ನಂಜೆಯಲ್ಲಿ ಪೂರೈಸಿರುವ ತಾವು ಕಳೆದ 24 ವರ್ಷಗಳಿಂದ ಶಂಕರಪುರ ಫ್ರೆಂಡ್ಸ್ ಕ್ಯಾಟರರ್ಸ್ ಎಂಬ ಸಂಸ್ಥೆಯಲ್ಲಿ ಉದ್ಯೋಗಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.