ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕುತ್ಯಾರು ಗ್ರಾ. ಪಂ ವಿವಿಧ ಕಾಮಗಾರಿಗಳಿಗೆ 3 ಕೋಟಿ 27 ಲಕ್ಷ ರೂ ಅನುದಾನ ; ಗುದ್ದಲಿ ಪೂಜೆ ; ಉದ್ಘಾಟನೆ

Posted On: 20-10-2022 10:44AM

ಕುತ್ಯಾರು : ಕಾಪು ತಾಲೂಕಿನ ಕುತ್ಯಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ 27 ಲಕ್ಷ ರೂಗಳ ವಿವಿಧ ಕಾಮಗಾರಿಗಳಲ್ಲಿ ಸುಮಾರು 19 ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ 3 ಕಾಮಗಾರಿಗಳಿಗೆ ಉದ್ಘಾಟನೆ ಶಾಸಕರಾದ ಲಾಲಾಜಿ ಆರ್ ಮೆಂಡನ್ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಬಿಜೆಪಿ ನೇತೃತ್ವದ ಕುತ್ಯಾರು ಗ್ರಾಮ ಪಂಚಾಯತ್ ಉತ್ತಮವಾಗಿ ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಿದ್ದು ಜನಪ್ರತಿನಿಧಿಗಳು ಜನರೊಂದಿಗೆ ನಿಕಟಸಂಪರ್ಕ ಹೊಂದಿದ್ದು ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು ಈಗಾಗಲೇ 5.33 ಕೋಟಿ ಅನುದಾನ ಹಾಗೂ ಈ ಭಾಗದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕುತ್ಯಾರು ಇದರ ನೂತನ ಕಟ್ಟಡ ನಿರ್ಮಾಣಕ್ಕೆ 18 ಕೋಟಿ ರೂಗಳನ್ನು ಒದಗಿಸಲಾಗಿದೆ ಶೀಘ್ರದಲ್ಲಿ ಲೋಕಾರ್ಪಣೆಗೊಳ್ಳಲಿದೆ ಹಾಗೂ ಪಂಚಾಯತ್ ವ್ಯಾಪ್ತಿಯಲ್ಲಿ ಇನ್ನು ಹೆಚ್ಚಿನ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಶಿಲ್ಪಾ ಜಿ ಸುವರ್ಣ, ಗ್ರಾಮ ಪಂಚಾಯತ್ ಅಧ್ಯಕ್ಷರು ಲತಾ ಎಸ್ ಆಚಾರ್ಯ, ಉಪಾಧ್ಯಕ್ಷರು ರಾಜಾ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಜನಿ ಭಟ್, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಶಶಿಪ್ರಭಾ, ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ಧನ ಆಚಾರ್ಯ, ಗಣೇಶ್ ಶೆಟ್ಟಿ ಪಯ್ಯರು, ಸಂಪತ್ ಪೂಜಾರಿ, ಶೈಲೇಶ್, ದಿವ್ಯ ಶೆಟ್ಟಿಗಾರ್, ಭಾರತಿ, ಎವುಜಿನ್ ಲೋಬೊ, ಅಗ್ನೇಯಸ್ ಮಥಯಸ್, ಸ್ಥಳೀಯ ಮುಖಂಡರಾದ ಕುತ್ಯಾರು ನವೀನ್ ಶೆಟ್ಟಿ, ಪ್ರಸಾದ್ ಶೆಟ್ಟಿ ಕುತ್ಯಾರು, ಧೀರಜ್ ಶೆಟ್ಟಿ, ನವೀನ್ ಶೆಟ್ಟಿ, ವೈ. ಎಸ್ ಭಂಡಾರಿ, ಅಶೋಕ್ ರಾವ್, ಶ್ರೀಕರ ಮಾಸ್ಟರ್, ಪ್ರದೀಪ್ ರಾವ್, ಸದಾಶಿವ ಆಚಾರ್ಯ, ಸುರೇಶ್, ಹರೀಶ್ ಆಚಾರ್ಯ, ರಾಘವೇಂದ್ರ ಹಾಗೂ ಸ್ಥಳೀಯರು, ಗುತ್ತಿಗೆದಾರರು, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.