ಅಕ್ಟೋಬರ್ 26 : ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸ್ಪರ್ಧೆ
Posted On:
22-10-2022 01:07AM
ಕಟಪಾಡಿ : ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಸಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದ್ದು ಈ ಬಾರಿ ದೀಪಾವಳಿಯನ್ನು ಅರ್ಥೂರ್ಣವಾಗಿಸುವ ನಿಟ್ಟಿನಲ್ಲಿ ಅಕ್ಟೋಬರ್ 26ರಂದು ಸಂಜೆ 4 ಗಂಟೆಗೆ ಕಾಪು ಬೀಚ್ ನಲ್ಲಿ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ಟ್ರಸ್ಟಿ ಶ್ರೀಶ ನಾಯಕ್ ಶುಕ್ರವಾರ ಕಟಪಾಡಿ ಮಟ್ಟುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈಗಾಗಲೇ ಸುಮಾರು ಆನ್ ಲೈನ್ ಮುಖಾಂತರ 100 ಸ್ಪರ್ಧಿಗಳು ಹೆಸರು ನೋಂದಾಯಿಸಿದ್ದಾರೆ. ಪ್ಲಾಸ್ಟಿಕ್ ಬಳಕೆ ಇಲ್ಲದ ಗೂಡುದೀಪಕ್ಕೆ ಪ್ರಾಶಸ್ತ್ಯ ನೀಡಲಾಗುವುದು. ಪ್ರಥಮ ಬಹುಮಾನ ರೂ. 11,111 ದ್ವಿತೀಯ ರೂ. 7,777 ತೃತೀಯ ರೂ.5,555 ನೀಡಲಾಗುವುದು.
ಪ್ರತಿಷ್ಠಾನ ಆರಂಭದ ಮೊದಲೂ ಪ್ರತಿವರ್ಷ ಸುಮಾರು 20 ಲಕ್ಷ ರೂಪಾಯಿಗಳನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿರುತ್ತೇವೆ. ಈಗಾಗಲೇ 21 ಕ್ಯಾನ್ಸರ್ ಪೀಡಿತರಿಗೆ, 12 ಕುಟುಂಬಗಳಿಗೆ ಮನೆ ಕಟ್ಟಲು ಸಹಾಯ, ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರು 9 ಮಂದಿಗೆ ಸಹಾಯ, ಸುಮಾರು 20 ಮಂದಿ ಆರೋಗ್ಯ ಸಮಸ್ಯೆಯವರಿಗೆ ಸಹಾಯ ಇತ್ಯಾದಿ ಕಾರ್ಯಗಳಲ್ಲಿ ಟ್ರಸ್ಟ್ ಸಹಾಯ ಮಾಡಿದೆ.
ಸಾಂಸ್ಕೃತಿಕ, ಧಾರ್ಮಿಕವಾಗಿ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ನಮ್ಮ ಟ್ರಸ್ಟ್ ಇದೆ. ತಂದೆಯ ಸಮಾಜಮುಖಿ ಕಾರ್ಯವನ್ನು ಮಕ್ಕಳು ಮುಂದುವರಿಸುತ್ತಿದ್ದೇವೆ ಎಂದರು. ಮುಂದಿನ ದಿನಗಳಲ್ಲಿ ಲೋಕ ಕಲ್ಯಾಣಕ್ಕಾಗಿ ಸಹಸ್ರ ದೀಪಾರ್ಚನೆ ಎಂಬ ಕಾರ್ಯಕ್ರಮವನ್ನು ಹಿರಿಯಡ್ಕ ವೀರಭದ್ರ ದೇವಸ್ಥಾನದಲ್ಲಿ ಮಾಡುವ ಯೋಜನೆಯಿದೆ ಎಂದರು.
ಈ ಸಂದರ್ಭ ಟ್ರಸ್ಟ್ ನ ಸದಸ್ಯರಾದ ಅನಿಲ್ ಶೆಟ್ಟಿ, ಪ್ರತಾಪ್ ಚಂದ್ರ ಶೆಟ್ಟಿ, ಸಂತೋಷ್ ಮೂಡುಬೆಳ್ಳೆ, ಮತ್ತಿತರರು ಉಪಸ್ಥಿತರಿದ್ದರು.