ಕಾಪು : ವಿದ್ಯಾನಿಕೇತನ ಸಂಸ್ಥೆಯಲ್ಲಿ ದೀಪಾವಳಿ ಆಚರಣೆ ; ಮಕ್ಕಳು - ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ
Posted On:
23-10-2022 05:24PM
ಕಾಪು : ವಿದ್ಯಾನಿಕೇತನ ಸಂಸ್ಥೆಯು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿದ್ದು ಅದರ ಭಾಗವಾಗಿ ನಮ್ಮ ಆಚರಣೆಗಳ ಬಗ್ಗೆ ಮಕ್ಕಳಿಗೆ ತಿಳಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಪತ್ರಕರ್ತ ರಾಕೇಶ್ ಕುಂಜೂರು ಹೇಳಿದರು.
ಅವರು ಕಾಪು ವಿದ್ಯಾನಿಕೇತನ್ ಶಾಲೆಯಲ್ಲಿ ಜರಗಿದ ದೀಪಾವಳಿ ಆಚರಣೆಯ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ದೀಪಾವಳಿ ಎಂದರೆ ಅದು ಹಬ್ಬಗಳ ರಾಜ. ದೀಪಾವಳಿ ಎಂದರೆ ಪಟಾಕಿ ಹಚ್ಚಿ ಸಂಭ್ರಮಿಸುವ ಜೊತೆಗೆ ಆಚರಣೆಗಳ ಬಗೆಗೂ ತಿಳಿಯಬೇಕಾಗಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.
ಈ ಸಂದರ್ಭ ಸಂಸ್ಥೆಯ ಮುಖ್ಯಸ್ಥರಾದ ಕೆ ಪಿ ಆಚಾರ್ಯ, ಸಹ ಮುಖ್ಯಸ್ಥೆ ಶ್ವೇತಾ ಆಚಾರ್ಯ, ಮುಖ್ಯ ಶಿಕ್ಷಕಿ ರಂಜಿತ, ಶಾಲಾ ವಿದ್ಯಾರ್ಥಿಗಳು, ಶಾಲಾ ಶಿಕ್ಷಕ ವರ್ಗ, ಸಿಬಂದಿ ವರ್ಗ, ಪೋಷಕರು ಉಪಸ್ಥಿತರಿದ್ದರು.
ಸಂಸ್ಥೆಯ ಮಕ್ಕಳು ಮತ್ತು ಶಿಕ್ಷಕರಿಂದ ದೀಪಾವಳಿ ಕುರಿತಾದ ಕಿರು ಪ್ರಹಸನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.