ಕಾಪು : ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ಕಾಪು ತಾಲೂಕು, ಕಾಪು ಪುರಸಭಾ ವತಿಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ಕಾಪು ಪ್ರಥಮದರ್ಜೆ ಕಾಲೇಜಿನಲ್ಲಿ ಶುಕ್ರವಾರ ಜರಗಿತು.
ಕಾಪು ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ ಸಂಕಲ್ಪ ವಿಧಿ ಬೋಧಿಸಿದರು.
ಗುರುಚರಣ್ ಪೊಲಿಪು ನೇತೃತ್ವದಲ್ಲಿ ಕಾಪು ಪರಿಸರದ ವಿವಿಧ ಕಾಲೇಜು, ಶಾಲೆಯ ಮಕ್ಕಳು ಕನ್ನಡ ನಾಡು ನುಡಿಯ ಗೀತೆಗಳನ್ನು ಹಾಡಿದರು.
ಈ ಸಂದರ್ಭ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಪುರಸಭೆಯ ಅಧಿಕಾರಿ ವೆಂಕಟೇಶ ನಾವಡ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುಂಡಲಿಕ ಮರಾಠೆ, ಸುಧಾಮ ಶೆಟ್ಟಿ, ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅನಿಲ್ ಕುಮಾರ್, ಕಾಪು ಪುರಸಭಾ ಸದಸ್ಯರು, ಅಧಿಕಾರಿ ವರ್ಗ, ಸಿಬ್ಬಂದಿಗಳು, ಶಾಲಾ ಶಿಕ್ಷಕ ವರ್ಗ, ಕಾಲೇಜಿನ ಪ್ರಾಧ್ಯಾಪಕ ವರ್ಗ, ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.