ಅಕ್ಟೋಬರ್ 30 : ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಆರ್ ಸಿ ಸಿ ಜಂಟಿ ಆಶ್ರಯದಲ್ಲಿ ಭಜನಾ ಸ್ಪರ್ಧೆ -2022
Posted On:
28-10-2022 01:06PM
ಕಾಪು : ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ರೋಟರಿ ಸಮುದಾಯದಳ ಪಡುಬಿದ್ರಿ ಜಂಟಿ ಆಶ್ರಯದಲ್ಲಿ ನಶಿಸಿ ಹೋಗುವ ಭಜನೆ ಕಲೆಯನ್ನು ಯುವ ಜನತೆಗೆ ಪ್ರೇರೇಪಿಸುವ ನಿಟ್ಟಿನಲ್ಲಿ 6ನೇ ಬಾರಿಗೆ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ -2022 ಅಕ್ಟೋಬರ್ 30, ಆದಿತ್ಯವಾರ ಬೆಳಿಗ್ಗೆ 9 ರಿಂದ ಸಂಜೆ 6:30ರ ತನಕ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಜರಗಲಿದೆ. ಭಜನಾ ಸ್ಪರ್ಧಾ ಕಾರ್ಯಕ್ರಮವನ್ನು ಬೆಂಗಳೂರು ಆದಾಯ ತೆರಿಗೆ ಇಲಾಖೆಯ ಅಧಿಕಾರಿ ರೇಖಾ ಮೋಹನ್ ಉದ್ಘಾಟಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪಡುಬಿದ್ರಿ ಸ್ಥಾಪಕ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಶುಕ್ರವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಅವಿಭಜಿತ ಜಿಲ್ಲೆಯ 12 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಪ್ರಥಮ ಬಹುಮಾನ ರೂ.10,000 ಶಾಶ್ವತ ಫಲಕ ಹಾಗೂ ಪ್ರಶಸ್ತಿ ಪತ್ರ, ದ್ವಿತೀಯ ರೂ. 7,000 ಶಾಶ್ವತ ಫಲಕ ಹಾಗೂ ಪ್ರಶಸ್ತಿ ಪತ್ರ, ತೃತೀಯ ರೂ.5,000 ಶಾಶ್ವತ ಫಲಕ ಹಾಗೂ ಪ್ರಶಸ್ತಿ ಪತ್ರ ಹಾಗೂ ಉತ್ತಮ ಗಾಯಕ, ಗಾಯಕಿ, ಉತ್ತಮ ತಬಲ ವಾದಕ, ಹಾರ್ಮೋನಿಯಂ ವಾದಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಸಮಾಜ ಸೇವಕ ರವಿ ಕಟಪಾಡಿ ಮತ್ತು ಕಲರ್ಸ್ ಕನ್ನಡ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ದ್ವಿತೀಯ ಪ್ರಶಸ್ತಿ ಪಡೆದ ಸಂಗೀತ ಕಲಾವಿದ ಸಂದೇಶ ನಿರುಮಾರ್ಗ, ವೈದ್ಯಕೀಯ ಕ್ಷೇತ್ರದಲ್ಲಿ ಡಾ| ಸುರೇಶ್ ಕೋಟ್ಯಾನ್ ಚಿತ್ರಾಪುರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪಡುಬಿದ್ರಿ ರೋಟರಿ ಸ್ಥಾಪಕ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ಅಧ್ಯಕ್ಷರಾದ ಗೀತಾ ಅರುಣ್, ಕಾರ್ಯದರ್ಶಿ ಜ್ಯೋತಿ ಮೆನನ್, ರೋಟರಿ ಸಮುದಾಯದಳದ ಅಧ್ಯಕ್ಷೆ ದೀಪಾಶ್ರೀ ಕರ್ಕೇರ, ಕಾರ್ಯದರ್ಶಿ ತನಿಷಾ ಜಿ. ಕುಕ್ಯಾನ್, ರೋಟರಿ ಕ್ಲಬ್ ಸದಸ್ಯರಾದ ಸುನಿಲ್ ಕುಮಾರ್, ಸುಧಾಕರ್, ಸಂತೋಷ್ ಉಪಸ್ಥಿತರಿದ್ದರು.