ಕಾಪು : ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ
Posted On:
29-10-2022 05:23PM
ಕಾಪು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಇವರ ನೇತ್ರತ್ವದಲ್ಲಿ ಜನ ಸಂಕಲ್ಪ ಸಮಾವೇಶ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆಯಿತು.
ಶಕ್ತಿಕೇಂದ್ರ ಉಸ್ತುವಾರಿಗಳ ಜವಾಬ್ದಾರಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿವರಿಸಿ ಪ್ರತೀ ಬೂತ್ ಗಳಲ್ಲಿ ಇರುವ ಫಲಾನುಭವಿಗಳನ್ನು ಸಂಪರ್ಕಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ ನೀಡಿದರು.
ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಶಕ್ತಿಕೇಂದ್ರಗಳ ಜವಾಬ್ದಾರಿ ಹೊಂದಿರುವ ಪದಾಧಿಕಾರಿಗಳು ಹಾಗೂ ವಿವಿಧ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಉಪಸ್ಥಿತರಿದ್ದರು.