ರೋಟರಿ ಶಂಕರಪುರ : ದೀಪಾವಳಿ ಆಚರಣೆ ; ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ
Posted On:
03-11-2022 05:53PM
ಕಾಪು : ರೋಟರಿ ಶಂಕರಪುರದ ವತಿಯಿಂದ ದೀಪಾವಳಿ ಆಚರಣೆ ಹಾಗೂ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ರೋಟರಿ ಜಿಲ್ಲೆ 3182 ರ ವಲಯ 5 ರ ಸಹಾಯಕ ಗವರ್ನರ್ ಡಾ| ಶಶಿಕಾಂತ ಕರಿಂಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತಿಥಿಗಳು ಸಾಮೂಹಿಕವಾಗಿ ದೀಪಗಳನ್ನು ಉರಿಸುವ ಮೂಲಕ ದೀಪಾವಳಿ ಶುಭಾಶಯ ವಿನಿಮಯ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯವರು ಅಂತರಾಷ್ಟ್ರೀಯ ರೋಟರಿಯು ಸಾಕ್ಷರತೆಗೆ ಹೆಚ್ಚಿನ ಪ್ರಾಧಾನ್ಯತೆಯನ್ನು ನೀಡಿದ್ದು, ರೋಟರಿ ಇಂಡಿಯಾ ಲಿಟರಸಿ ಮಿಷನ್ ಮೂಲಕ ಸಾಕ್ಷರತಾ ಕಾರ್ಯಕ್ರಮದ ಅಡಿಯಲ್ಲಿ ಶಾಲೆಗಳ ಸಬಲೀಕರಣ ಶಿಕ್ಷಣದ ಗುಣಮಟ್ಟದ ಪೂರಕ ಯೋಜನೆ, ತರಬೇತಿ ಮತ್ತು ಪ್ರತಿಭಾನ್ವಿತ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ಪ್ರಧಾನ ಮಾಡುವ ಮೂಲಕ ಪ್ರೋತ್ಸಾಹಿಸುತ್ತಿದೆ ಹಾಗೂ ದೀಪಾವಳಿ ಹಬ್ಬದ ವಿಶೇಷತೆಯ ಬಗ್ಗೆ ಮಾಹಿತಿಯನ್ನು ನೀಡಿದರು.
ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ : ಪರಿಸರದ ವಿವಿಧ ಶಾಲೆಗಳ ಪ್ರತಿಭಾನ್ವಿತ ಶಿಕ್ಷಕರಾದ ಎಸ್ ವಿ ಎಚ್ ಇಂಗ್ಲಿಷ್ ಮೀಡಿಯಂ ಹೈ ಸ್ಕೂಲ್ ಇನ್ನಂಜೆ ಸತೀಶ್ ನಾಯಕ್, ವಿದ್ಯಾವರ್ಧಕ ಹೈಸ್ಕೂಲ್ ಪಾಂಗಳ ಕಲ್ಯಾಣಿ, ಎಸ್ ವಿ ಎಚ್ ಹೈ ಸ್ಕೂಲ್ ಇನ್ನಂಜೆ ವಿಶ್ವನಾಥ ನಾಯ್ಕ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಚ್ಚಡ ಜಯಶ್ರೀ ಕೆ, ಸೈಂಟ್ ಜಾನ್ಸ್ ಅಕಾಡೆಮಿ ಹೈಸ್ಕೂಲ್, ಶಂಕರಪುರ ಸವಿತಾ ಮುರಳಿಧರ್, ಸೈಂಟ್ ಜಾನ್ಸ್ ಕನ್ನಡ ಮೀಡಿಯಂ ಹೈ ಸ್ಕೂಲ್ ಸುನೀತಾ ಲೀನಾ ಡಿಸೋಜ, ಇವರುಗಳಿಗೆ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ ಮಾಡಲಾಯಿತು.
ಸಭೆಯಲ್ಲಿ ರೇಣುಕಾ ಆರ್ ವಾಲ್ಮೀಕಿಯವರ ಮನವಿಯ ಮೇರೆಗೆ ಮಗುವಿನ ಚಿಕಿತ್ಸೆಗೆ ರೋಟರಿ ಟ್ರಸ್ಟ್ ವತಿಯಿಂದ 10,000 ರೂ ಚೆಕ್ ಅನ್ನು ಡಾ| ಶಶಿಕಾಂತ ಕರಿಂಕ ವಿತರಿಸಿದರು.
ರೋಟರಿ ಶಂಕರಪುರದ ಜನಪಯೋಗಿ ಕಾರ್ಯಕ್ರಮಗಳಲ್ಲಿ ಒಂದಾದ ಉಚಿತ ಮಾನಸಿಕ ಶಿಬಿರವು ಪ್ರತಿ ತಿಂಗಳ ಮೊದಲ ಭಾನುವಾರ ಸುಮಾರು 18 ವರ್ಷಗಳಿಂದ ನಡೆಯುತಿದೆ, ಈ ಶಿಬಿರದ ಮೆಡಿಸಿನ್ ವಿಭಾಗವನ್ನು 18 ವರ್ಷಗಳ ಕಾಲ ಉಚಿತ ಸೇವೆಯನ್ನು ನೀಡುತ್ತಾ ಬಂದಿರುವ ನಾಗರಾಜ್ ಮೂರ್ತಿ ಹಾಗೂ ಅವರ ಧರ್ಮಪತ್ನಿಯವರನ್ನು ರೋಟರಿಯ ಎಲ್ಲಾ ಹಿರಿಯ ಸದಸ್ಯರು ಸೇರಿ ಸನ್ಮಾನಿಸಿದರು. ಎಡ್ವಿನ್ ನೋಯಲ್ ಡಿಸಿಲ್ವ ಪ್ರಾರ್ಥನೆಯನ್ನು ನೆರವೇರಿಸಿದರು.
ಅಂಥೋನಿ ಡೇಸಾ ರವರು ನೇಶನ್ ಬಿಲ್ಡರ್ ಅವಾರ್ಡ ಬಗ್ಗೆ ಮಾಹಿತಿ ನೀಡಿದರು. ಜೇರೋಮ್ ರೋಡ್ರಿಗಸ್ ರವರು ನಾಗರಾಜ್ ಮೂರ್ತಿಯವರನ್ನು ಪರಿಚಯಿಸಿದರು. ಮಾಲಿನಿ ಶೆಟ್ಟಿಯವರು ಡಾ. ಶಶಿಕಾಂತ್ ಕರಿಂಕರವರ ಪರಿಚಯವನ್ನು ವಾಚಿಸಿದರು, ವೇದಿಕೆಯಲ್ಲಿ ಕ್ಲಬ್ ಸರ್ವಿಸ್ ಡೈರೆಕ್ಟರ್ ಫ್ರಾನ್ಸಿಸ್ ಡೇಸಾ ಉಪಸ್ಥಿತರಿದ್ದರು. ಅಧ್ಯಕ್ಷ ಗ್ಲಾಡಸನ್ ಕುಂದರ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಕಾರ್ಯದರ್ಶಿ ಸಿಲ್ವಿಯ ಕಸ್ಟಲೀನೋ ವಂದಿಸಿದರು.