ಕಾಪು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಕಾಪು ಕ್ಷೇತ್ರದ ನೂತನ ಕಛೇರಿ ಕಾಪುವಿನ ಹಿರಾ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು.
ಎಸ್ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮೊಹಮ್ಮದ್ ತುಂಬೆ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಸಿವು ಮತ್ತು ಭಯ ಮುಕ್ತ ಸ್ವಾತಂತ್ರವೇ ಎಸ್ಡಿಪಿಐ ಪಕ್ಷದ ಉದ್ದೇಶ. ರಾಜಕೀಯದಲ್ಲಿ ನಿರಾಸೆ ಸಲ್ಲದು. ಇಂದಲ್ಲ ನಾಳೆ ಗೆದ್ದೇ ಗೆಲ್ಲುತ್ತೇವೆ ಎಂ ಛಲ ನಮ್ಮಲ್ಲಿದ್ದರೆ, ವಿಜಯ ಪತಾಕೆ ನಮ್ಮದಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಶಾಹಿದ್ ಅಲಿ ವಹಿಸಿದ್ದರು.
ಎಸ್ಡಿಪಿಐ ಮುಖಂಡರಾದ ಅಥಾವುಲ್ಲಾ ಜೋಕಟ್ಟೆ, ಹನೀಫ್ ಮೂಳೂರು, ಅಬೂಬಕ್ಕರ್ ಪಾದೂರು,
ಅಶ್ರಫ್ ಅಹಮದ್, ಸರಿತಾ, ಮಜೀದ್ ಪೊಲ್ಯ,
ನೂರುದ್ದೀನ್ ಕಾಪು, ಆಸಿಫ್ ವೈಸಿ ಉಚ್ಚಿಲ ಹಾಗು ಅಝೀಝ್ ಪಡುಬಿದ್ರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.