ಪಡುಬಿದ್ರಿ : 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಿಂದ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಡುಗೆಯಾಗಿ ನೀಡಿದ ಶೀತಲೀಕೃತ ಶವಗಾರವನ್ನು ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪ್ರಥಮವಾಗಿ ನೂತನ ಶೀತಲಿಕೃತ ಘಟಕ ಚಾಲನೆಗೊಂಡಿದ್ದು ಉತ್ತಮ ಬೆಳವಣಿಯಾಗಿದ್ದು. ಅಮೃತಯೋಜನೆಯಡಿ ತನ್ನ ಶಿಫಾರಸ್ಸಿನ ಮೇರೆಗೆ 20 ಲಕ್ಷ ಅನುದಾನದಲ್ಲಿ ಶವಗಾರ ಕಟ್ಟಡ ನಿರ್ಮಾಣಗೊಂಡಿದ್ದು ಹಾಗೂ ನೂತನ ಶವಗಾರಕ್ಕೆ 5 ಲಕ್ಷ ಮೊತ್ತದ ಶೀತಲಿಕೃತ ಘಟಕವನ್ನು ಸಹಕಾರ ಸಪ್ತಾಹ ನಿಟ್ಟಿನಲ್ಲಿ ಕೊಡಮಾಡಿದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಪಡುಬಿದ್ರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ನಾಗಭೂಷಣ್ ಉಡುಪ, ತಾಲೂಕು ವೈದ್ಯಾಧಿಕಾರಿ ವಾಸುದೇವ್ ಉಪಾಧ್ಯಾಯ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ಮಹಾಲಕ್ಷ್ಮಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಯಶಪಾಲ್ ಸುವರ್ಣ, ಸೇವಾಭಾರತಿ ಬೆಳ್ತಂಗಡಿ ಅಧ್ಯಕ್ಷರಾದ ಕೆ ವಿನಾಯಕ್ ರಾವ್ , ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ ಕೋಟ್ಯಾನ್, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಪಡುಬಿದ್ರಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜಶ್ರೀ ಕಿಣಿ, ಪಡುಬಿದ್ರಿ ಗಣಪತಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ ಎಚ್, ಸೊಸೈಟಿಯ ನಿರ್ದೇಶಕರು, ಸಿಬ್ಬಂದಿ ವರ್ಗ, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.