ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಶಿರ್ವ : ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿಯಲ್ಲಿ ಪ್ರತಿಭಾ ದಿನಾಚರಣೆ

Posted On: 21-11-2022 05:29PM

ಶಿರ್ವ : ಕುತ್ಯಾರಿನಲ್ಲಿರುವ ಆನೆಗುಂದಿ ಶ್ರೀ ಸರಸ್ವತಿ ಪೀಠದ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್‌ನಲ್ಲಿ ನವೆಂಬರ್ 19ರಂದು ಪ್ರತಿಭಾ ದಿನಾಚರಣೆ ಆಚರಿಸಲಾಯಿತು.

ಖ್ಯಾತ ಗಾಯಕಿ ಹಾಗೂ ಕಲಾವಿದೆ ಕಾವ್ಯಶ್ರೀ ಆಚಾರ್ಯ ಕೊಡವೂರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಭಾವಪೂರ್ಣವಾದ ಮಧುರ ಗೀತೆಗಳೊಂದಿಗೆ ಮಕ್ಕಳನ್ನು ರಂಜಿಸಿದರು.

ಆನೆಗುಂದಿ ಶ್ರೀ ಸರಸ್ವತಿ ಎಜುಕೇಶನ್ ಟ್ರಸ್ಟ್ (ಆಸೆಟ್) ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ವಿದ್ವಾನ್ ಶಂಭುದಾಸ್ ಗುರೂಜಿ, ಪ್ರಾಂಶುಪಾಲ ಗುರುದತ್ತ ಸೋಮಯಾಜಿ, ವಿಜಯಲಕ್ಷ್ಮಿ ತಂತ್ರಿ, ಸಹಾಯಕ ಪ್ರಾಂಶುಪಾಲೆ ಸಂಗೀತಾ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಶಿಕ್ಷಕರ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಂತರ ನಡೆದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು. ವಿದ್ಯಾರ್ಥಿಗಳು ನೃತ್ಯ, ಗಾಯನ ಮತ್ತು ಕಿರುನಾಟಕ ಕಾರ್ಯಕ್ರಮಗಳೊಂದಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.