ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಳಕ್ಕೆ ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

Posted On: 23-11-2022 07:00PM

ಉಚ್ಚಿಲ : ಇತ್ತೀಚೆಗೆ ನವೀಕೃತಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.

ದೇವಳದ ವತಿಯಿಂದ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಖ್ಯ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀದೇವಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.

ದೇವಾಲಯದ ರುವಾರಿ ನಾಡೋಜ ಡಾ. ಜಿ. ಶಂಕರ್ ರವರು ದೇವಳದ ವತಿಯಿಂದ ಗೃಹ ಸಚಿವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿದರು.

ಈ ಸಂದರ್ಭ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲಿಯನ್, ಮಹಾಜನ ಸಂಘದ ಮಹಿಳಾ ಘಟಕದ ಉಪಾಧ್ಯಕ್ಷೆ ಜಾನಕಿ ಲೀಲಾಧರ್, ನಾರಾಯಣ ಕರ್ಕೇರಾ, ದಿನೇಶ್ ಎರ್ಮಾಳು, ದಿನೇಶ್ ಮೂಳೂರು, ಮೋಹನ್ ಬಂಗೇರ, ದೇವಳದ ಪ್ರಧಾನ ಕಾರ್ಯನಿರ್ವಾಹಕ ಸತೀಶ್ ಅಮೀನ್ ಮಟ್ಟು, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ. ಸಿ ಪೂವಯ್ಯ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಮತ್ತಿತರರು ಉಪಸ್ಥಿತರಿದ್ದರು.