ಕಾಪು : ತಾಲೂಕಿನ ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಳಿಯಾರು ಶ್ರೀ ಧೂಮಾವತಿ ದೈವಸ್ಥಾನಕ್ಕೆ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವಿವಾರ ಭೇಟಿ ನೀಡಿದರು.
1 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ದೈವಸ್ಥಾನದ ಕಾಮಗಾರಿ ವೀಕ್ಷಣೆ ಮಾಡಿದರು. ಹಾಗೂ ದೈವಸ್ಥಾನದ ಅಭಿವೃದ್ಧಿಗೆ ಹೆಚ್ಚಿನ ಮೊತ್ತದ ಅನುದಾನ ದೊರಕಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಕಾರ್ಯದರ್ಶಿ ಸತೀಶ್ ಶೆಟ್ಟಿ ಹಾಗೂ ಪ್ರಮುಖರಾದ ವೀರೇಂದ್ರ ಪೂಜಾರಿ, ಚಂದ್ರಹಾಸ ಶೆಟ್ಟಿ, ಅಶೋಕ್ ಪೂಜಾರಿ, ವಿಶ್ವನಾಥ್ ಕುರ್ಕಾಲು, ಸುಧರ್ಶನ್ ಕುರ್ಕಾಲು, ಸುಮಾ ಶೆಟ್ಟಿ, ಪ್ರಮೀಳಾ ಆಚಾರ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗಿತಾ ಹಾಗೂ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.