ಉಡುಪಿ : ಕುಲಾಲ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ಇದರ ವಾರ್ಷಿಕ ಮಹಾಸಭೆ ಮತ್ತು ಸತ್ಯನಾರಾಯಣ ಪೂಜೆ ಹಾಗೂ ಕುಲಾಲ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ರವಿವಾರ ಶಾರದಾ ಹೈಸ್ಕೂಲ್ ಚೇರ್ಕಾಡಿಯಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ದೇವರಾಜ್ ಅರಸು ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಡಾl. ಅಣ್ಣಯ್ಯ ಕುಲಾಲ್ ಉಳ್ತೂರು ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಐತು ಕುಲಾಲ್ ಕನ್ಯಾನ ಇವರನ್ನು ಸನ್ಮಾನಿಸಿ ಕುಲಾಲ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಕುಲಾಲ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ಅಧ್ಯಕ್ಷರಾದ ರಾಜೀವ ಕುಲಾಲ್, ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ಯುವ ವೇದಿಕೆ ಗೌರವಾಧ್ಯಕ್ಷರಾದ ತೇಜಸ್ವಿರಾಜ್, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ (ನಿ.) ಪೆರ್ಡೂರು ಅಧ್ಯಕ್ಷರಾದ ಸಂತೋಷ್ ಕುಲಾಲ್, ಕುಲಾಲ ಸಂಘ (ರಿ.) ಪೆರ್ಡೂರು ಅಧ್ಯಕ್ಷರಾದ ಕೃಷ್ಣಪ್ಪ ಕುಲಾಲ, ಕುಲಾಲ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ಗೌರವಾಧ್ಯಕ್ಷರಾದ ಮಂಜುನಾಥ ಕುಲಾಲ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.