ಕಾಪು : ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ದಿ| ಆರ್ ಡಿ ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ, ಕಾಪು ಇದರ ಸಂಯುಕ್ತ ಆಶ್ರಯದಲ್ಲಿ ಕಾಪು ದೀಪಸ್ಥಂಭದ ಬಳಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಕಡಲ ಐಸಿರ 2022 ಡಿಸೆಂಬರ್ 16,17,18 ರಂದು ಜರಗಲಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷರಾದ
ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಕಾಪುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಲಾಲ್ ಬಹುದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಆಂಡ್ ಕಲ್ಚರಲ್ ಕ್ಲಬ್ ಸಂಸ್ಥೆಯ 45ನೇ ವಾರ್ಷಿಕೋತ್ಸವ ಕಾಪು ಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ದಿ. ಆರ್ ಡಿ ಮೆಂಡನ್ ಕಾಪು ಇವರ ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣಾ ಸಂಯುಕ್ತ ಆಶ್ರಯದಲ್ಲಿ ವಿವಿಧ ಕಾರ್ಯಕ್ರಮಗಳು ಕಾಪು ಕಡಲ ಕಿನಾರೆಯಲ್ಲಿ ಜರಗಲಿದೆ. ಈ ಹಿಂದೆ ಕಾರ್ಯಕ್ರಮಗಳನ್ನು ಆಯೋಜಿಸಿದ ತಂಡ ಈ ಬಾರಿ ಆಟದ ಜೊತೆಗೆ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ, ಫಲಪುಷ್ಪ ಕಲಾ ಸ್ಪರ್ಧೆ- ಪ್ರದರ್ಶನ, ಫುಡ್ ಫೆಸ್ಟಿವಲ್, ಲೇಸರ್ ಷೋ, ರಸಮಂಜರಿ, ಬಲೆ ಬೀಸಿ ಮೀನು ಹಿಡಿಯುವುದು, ಗಾಳ ಹಾಕಿ ಮೀನು ಹಿಡಿಯುವುದು, ಚೆಂಡೆ ಸ್ಪರ್ಧೆ, ಬೀಚ್ ವಾಲಿಬಾಲ್ ಸ್ಪರ್ಧೆ, ಮಹಿಳೆಯರಿಗಾಗಿ ತ್ರೋಬಾಲ್, ಸಂಗೀತ ಕುರ್ಚಿ ಇತ್ಯಾದಿ ಸ್ಪರ್ಧೆಗಳು, ಕೊಳಲು ತಬಲ ತಂಡ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ಧೋನಿ ಸ್ಪರ್ಧೆ, ಗಾಳಿಪಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಇದರಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದವರಿಗೆ ನಗದು ಬಹುಮಾನ ಇದೆ ಎಂದರು.
ಈ ಸಂದರ್ಭ ಸಂಸ್ಥೆಯ ಅಧ್ಯಕ್ಷರಾದ ಶೀಲರಾಜ್ ಪುತ್ರನ್, ಉಪಾಧ್ಯಕ್ಷರಾದ ಆನಂದ ಶ್ರೀಯಾನ್, ಕಾರ್ಯದರ್ಶಿ ಸಚಿನ್ ಪುತ್ರನ್, ಕೋಶಾಧಿಕಾರಿ ಕುಶ ಸಾಲ್ಯಾನ್, ದಿನೇಶ್ ಸುವರ್ಣ, ನಿತೇಶ್ ಸುವರ್ಣ, ರಾಜೇಶ್ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.