ಕಾಪು : ಕೊಪ್ಪಲಂಗಡಿಯಲ್ಲಿ ಪಾದಚಾರಿ ಮಹಿಳೆಗೆ ಶಾಲಾ ವಾಹನ ಡಿಕ್ಕಿ ; ಸ್ಥಳದಲ್ಲೇ ಸಾವು
Posted On:
09-12-2022 08:44PM
ಕಾಪು : ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೊಪ್ಪಲಂಗಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.
ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿಯವರ ಪತ್ನಿ ಸಪ್ನ (54) ಎಂದು ಗುರುತಿಸಲಾಗಿದೆ.
ಅವರು ಕೊಪ್ಪಲಂಗಡಿಯಲ್ಲಿ ದಿನಸಿ ಅಂಗಡಿಗೆ ಹೋಗಿ ಹಿಂತಿರುಗಿ ಮನೆ ಕಡೆಗೆ ಹೋಗಲು ಕಮ್ಯುನಿಟಿ ಹಾಲ್ ಸಮೀಪ ರಸ್ತೆ ದಾಟಲು ನಿಂತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿಯಾಗಿದೆ.
ಘಟನೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.