ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಕಾಪು ಶಾಸಕರಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಲ್ಕು ಕೊಠಡಿಗಳ ಶಿಲಾನ್ಯಾಸ

Posted On: 09-12-2022 10:49PM

ಪಡುಬಿದ್ರಿ : ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ಮತ್ತು ನೂತನ ಶೌಚಾಲಯ ಉದ್ಘಾಟನೆಯನ್ನು ಶುಕ್ರವಾರ ಕಾಪು ಶಾಸಕರಾದ ಲಾಲಾಜಿ ಮೆಂಡನ್ ನೆರವೇರಿಸಿದರು.

ಶಾಸಕರ ಶಿಫಾರಸ್ಸಿನ ಮೇರೆಗೆ ವಿವೇಕ ಶಾಲಾ ಕೊಠಡಿಗಳನ್ನು 55.6 ಲಕ್ಷ ವೆಚ್ಚದಲ್ಲಿ (ನಾಲ್ಕು ಕೊಠಡಿಗಳು) ನಿರ್ಮಾಣವಾಗಲಿದೆ.

ಈ ಸಂದರ್ಭ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷರಾದ ಯಶೋಧ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೃಷ್ಣ ಬಂಗೇರ, ಶಿಕ್ಷಣ ಇಲಾಖೆ ಸಂಯೋಜಕ ಶಂಕರ್ ಸುವರ್ಣ, ಪ್ರಾಥಮಿಕ ಮುಖ್ಯ ಶಿಕ್ಷಕ ಕೃಷ್ಣಾನಂದ, ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರಸನ್ನ, ಕಾಲೇಜು ಪ್ರಾಂಶುಪಾಲೆ ಅನುರಾಧ, ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಶೆಟ್ಟಿ ಹೇಮಚಂದ್ರ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ವಿನಯ, ರವೀಂದ್ರ, ಭಾರತಿ, ಲೋಕೇಶ್ ಕಂಚಿನಡ್ಕ, ಗುತ್ತಿಗೆದಾರರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.