ಪಡುಬಿದ್ರಿ : ಇಲ್ಲಿನ ಪೊಲೀಸ್ ಠಾಣೆ, ರೋಟರಿ ಕ್ಲಬ್ ಪಡುಬಿದ್ರಿ, ರೋಟರಿ ಸಮುದಾಯದಳ ಪಡುಬಿದ್ರಿ, ಇನ್ನರ್‌ವೀಲ್ ಕ್ಲಬ್
ಪಡುಬಿದ್ರಿ ಜಂಟಿ ಸಹಯೋಗದೊಂದಿಗೆ ರಸ್ತೆ ಸುರಕ್ಷತೆ ಹಾಗೂ ಅಪರಾಧ ತಡೆ ಮಾಸ ಜಾಗೃತಿ ಕಾರ್ಯಕ್ರಮದ ಅಂಗವಾಗಿ ನಡೆದ ಬೈಕ್ ರ್ಯಾಲಿಗೆ ಆದಿತ್ಯವಾರ ಪಡುಬಿದ್ರಿ ಪೇಟೆಯಲ್ಲಿ ಕಾಪು ವೃತ್ತನಿರೀಕ್ಷಕರಾದ ಕೆ.ಸಿ. ಪೂವಯ್ಯ ಚಾಲನೆ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು ರಸ್ತೆಯಲ್ಲಿ ವಾಹನ ಚಲಾಯಿಸುವವರು ತಮ್ಮ ಸುರಕ್ಷತೆಯ ಜೊತೆಗೆ ವಾಹನಗಳ ದಾಖಲೆಯನ್ನು ಇಟ್ಟುಕೊಳ್ಳಬೇಕಾಗಿದೆ. ಇದರ ಬಗೆಗಿನ ಜಾಗೃತಿ ಅನಿವಾರ್ಯ ಎಂದರು.
ರಸ್ತೆ ಸುರಕ್ಷತೆ ಹಾಗೂ ಅಪರಾಧ ತಡೆ ಮಾಸ ಜಾಗೃತಿ ಕಾರ್ಯಕ್ರಮದ ಅಂಗವಾಗಿ ನಡೆದ ಬೈಕ್
ರ‌್ಯಾಲಿಯು ಪಡುಬಿದ್ರಿ ಪೇಟೆಯಿಂದ ಪ್ರಾರಂಭಗೊಂಡು ಕೆಳಗಿನ ಪೇಟೆಯಾಗಿ ಬೀಚ್ ರಸ್ತೆಯ ಮೂಲಕ ಸಾಗಿ ಬೀಚ್ನಲ್ಲಿ ಸಮಾಪನಗೊಂಡಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಪಡುಬಿದ್ರಿಯ ಅಧ್ಯಕ್ಷರಾದ ಗೀತಾ ಅರುಣ್ ವಹಿಸಿದ್ದರು.
ಈ ಸಂದರ್ಭ ಪಡುಬಿದ್ರಿ ಪೊಲೀಸ್ ಠಾಣೆ ಠಾಣಾಧಿಕಾರಿ ಪುರುಷೋತ್ತಮ್, ಅಪರಾಧ ವಿಭಾಗದ ಪ್ರಕಾಶ್, ರೋಟರಿ ವಲಯ-5 ಸಹಾಯಕ ಗವರ್ನರ್ ಡಾ. ಶಶಿಕಾಂತ್ ಕಾರಿಂಕ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ ಪದ್ರ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ತಾಲೂಕ್ ಪಂಚಾಯತ್ ಮಾಜಿ ಸದಸ್ಯರಾದ ನವೀನ್ ಚಂದ್ರ ಜೆ ಶೆಟ್ಟಿ, ರಿಕ್ಷಾ ಯೂನಿಯನ್ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ರೋಟರಿ ವಲಯ 5 ರ ಪೂರ್ವ ಸಹಾಯಕ ಗವರ್ನರ್ ಗಣೇಶ್ ಆಚಾರ್ಯ ಉಚ್ಚಿಲ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ರಮೀಜ್ ಹುಸೇನ್, ಕಾಪುವಿನ ಎಲ್ಐಸಿ ಅಭಿವೃದ್ಧಿ ಅಧಿಕಾರಿ ರಮೇಶ್ ಯು, ಇನ್ನರ್ ವೀಲ್ ಕ್ಲಬ್ ಪಡುಬಿದ್ರಿ ಅಧ್ಯಕ್ಷೆ ವಿಮಲ ಕೆ ಸಾಲ್ಯಾನ್, ರೋಟರಿ ಸಮುದಾಯದಳ ಅಧ್ಯಕ್ಷೆ ದೀಪಾಶ್ರೀ ಕರ್ಕೇರ, ಸುಧಾಕರ್, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು.