ಉಡುಪಿ : ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬವನ್ನು ಇಂದು ಉಡುಪಿ ಆಶಾ ನಿಲಯ ವಿಕಲಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಆಚರಿಸಲಾಯಿತು.
ಕೇಕ್ ಕತ್ತರಿಸಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಯೋಗೇಶ್ ವಿ ಶೆಟ್ಟಿಯವರು, ಪ್ರತಿ ವರ್ಷದಂತೆ ಈ ವರ್ಷ ಕೂಡ ವಿಕಲ ಚೇತನ ಮಕ್ಕಳೊಂದಿಗೆ ಬೆರೆತು ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಮಾರಸ್ವಾಮಿಯವರಿಗೆ ವಿಕಲಚೇತನ ಮಕ್ಕಳಲ್ಲಿ ಅತಿಯಾದ ಪ್ರೇಮ ಹಾಗೂ ಮುಖ್ಯಮಂತ್ರಿ ಆಗಿದ್ದ ಸಂದರ್ಭ ವಿಕಲಚೇತನ ಮಕ್ಕಳಿಗೆ ಕ್ಷೀರಭಾಗ್ಯ ಮತ್ತು ಇತರ ಕಾರ್ಯಕ್ರಮಗಳನ್ನು ನಾಡಿಗೆ ನೀಡಿದ್ದರು. ಈ ಸಂದರ್ಭ ಅವರಿಗೆ ದೇವರು ಆರೋಗ್ಯ, ಆಯುಷ್ಯವನ್ನು ದೇವರು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡಿದರು ಮತ್ತು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅತೀ ಹೆಚ್ಚು ಸೀಟು ಲಭಿಸಿ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಾರೆ ಎಂದು ನುಡಿದರು ಮತ್ತು ಹುಟ್ಟುಹಬ್ಬದ ಶುಭಾಶಯಗಳು ಕೋರಿದರು. ತದ ನಂತರ ಮಕ್ಕಳಿಗೆ ಮಧ್ಯಾಹ್ನದ ಊಟೋಪಚಾರ ವ್ಯವಸ್ಥೆಯನ್ನು ಮಾಡಲಾಗಿತ್ತು. ಆಶಾ ನಿಲಯದ ಎಚ್ಎಂ ಶಶಿಕಲಾ ಕೋಟ್ಯಾನ್ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.
ಈ ಸಂದರ್ಭ ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ,ಜಿಲ್ಲಾ ಕಾರ್ಯಾಧ್ಯಕ್ಷರಾದ ವಾಸುದೇವ ರಾವ್, ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಮಹಿಳಾ ಅಧ್ಯಕ್ಷ ಶಾಲಿನಿ ಆರ್ ಶೆಟ್ಟಿ ಕೆಂಚನೂರು, ಜಿಲ್ಲಾ ಯುವ ನಾಯಕ ಸಂಜಯ್ ಕುಮಾರ್, ದಕ್ಷಿತ್ ಶೆಟ್ಟಿ, ಬಾಲಕೃಷ್ಣ ಆಚಾರ್ಯ, ಇಕ್ಬಾಲ್ ಅತ್ರಾಡಿ, ಭರತ್ ಕುಮಾರ್ ಶೆಟ್ಟಿ, ಇಸ್ಮಾಯಿಲ್ ಪಲಿಮಾರ್, ವೆಂಕಟೇಶ್ ಎಂಟಿ, ವಿಶಾಲಾಕ್ಷಿ ಶೆಟ್ಟಿ, ರಾಮರಾವ್, ಹರಣಿಕೋಟ್ಯಾನ್, ಅರುಣಾಕಿಣಿ, ಮಮತಾ, ರಂಗ ಆರ್ ಕೋಟ್ಯಾನ್, ಅರವಿಂದ ಶೆಟ್ಟಿ, ರೋಹಿತಾ ಶೆಟ್ಟಿ, ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು.