ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಕಾಪು : ಕಡಲ ಐಸಿರ 2022 ; ಜನಮನ ಸೆಳೆದ ಚೆಂಡೆವಾದನ

Posted On: 18-12-2022 09:02PM

ಕಾಪು : ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ದಿ| ಆರ್ ಡಿ ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ, ಕಾಪು ಇದರ ಸಂಯುಕ್ತ ಆಶ್ರಯದಲ್ಲಿ ಕಾಪು ದೀಪಸ್ಥಂಭದ ಬಳಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಕಡಲ ಐಸಿರ 2022 ಕಾರ್ಯಕ್ರಮದಲ್ಲಿ ಆದಿತ್ಯವಾರದಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಚೆಂಡೆ ವಾದನ ಜನಮನ ಸೆಳೆಯಿತು. ಸಭಾ ಕಾರ್ಯಕ್ರಮ, ಬೆಂಗಳೂರು ತಂಡದಿಂದ ರಸಮಂಜರಿ ಕಾರ್ಯಕ್ರಮವೂ ಜರಗಲಿದೆ.

ಈ ಹಿಂದೆ ಕಾರ್ಯಕ್ರಮಗಳನ್ನು ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ವತಿಯಿಂದ ಆದಿತ್ಯವಾರದಂದು ಆಟದ ಜೊತೆಗೆ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ, ಫುಡ್ ಫೆಸ್ಟಿವಲ್, ಲೇಸರ್ ಷೋ, ರಸಮಂಜರಿ, ಬಲೆ ಬೀಸಿ ಮೀನು ಹಿಡಿಯುವುದು, ಚೆಂಡೆ ಸ್ಪರ್ಧೆ, ಡ್ರಮ್ - ಚೆಂಡೆ ಸ್ಪರ್ಧೆ, ಕೊಳಲು - ಚೆಂಡೆ ವಾದನ, ಬೀಚ್ ವಾಲಿಬಾಲ್ ಸ್ಪರ್ಧೆ, ಕೊಳಲು ತಬಲ ತಂಡ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ಧೋನಿ ಸ್ಪರ್ಧೆ, ಗಾಳಿಪಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.