ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯ : ಅರ್ಜಿ ಆಹ್ವಾನ

Posted On: 26-12-2022 11:42PM

ಉಡುಪಿ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂರ್ಸ್ ಹಾಗೂ ಅವರ ಅವಲಂಬಿತರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ (ದ್ವಿ-ಚಕ್ರ / ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ) ಸಾಲ ಸೌಲಭ್ಯ ಪಡೆಯಲು ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.