ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಡಿಸೆಂಬರ್ 29ರಂದು ವಿದ್ಯುತ್ ವ್ಯತ್ಯಯ

Posted On: 26-12-2022 11:54PM

ಉಡುಪಿ : ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಸಂಪಿಗೆನಗರ ಮತ್ತು ಕಡೆಕಾರ್ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಾಲ್ಮರ, ಕಲಾಯಿಬೈಲು, ಸಂಪಿಗೆನಗರ, ಕುತ್ಪಾಡಿ, ಅನಂತಕೃಷ್ಣನಗರ, ಕಡೆಕಾರು, ಕಿದಿಯೂರು, ಪಡುಕೆರೆ, ಕನ್ನರ್ಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 29 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.