ಜನವರಿ 1 : ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ವಲಯ - ಹರಿವರಾಸನಂ ಶತಮಾನೋತ್ಸವ ; ವಿವಿಧ ಕಾರ್ಯಕ್ರಮಗಳು
Posted On:
29-12-2022 02:10PM
ಕಾಪು : ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ವಲಯದ ವತಿಯಿಂದ ಹರಿವರಾಸನಂ ಶತಮಾನೋತ್ಸವದ ನಿಮಿತ್ತ ವಿವಿಧ ಕಾರ್ಯಕ್ರಮಗಳು ಜನವರಿ 1, ಆದಿತ್ಯವಾರ ಕಾಪು ಲಕ್ಷ್ಮೀ ಜನಾರ್ದನ ದೇವಳದ ಸಭಾಭವನದಲ್ಲಿ ಜರಗಲಿದೆ ಎಂದು ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ ಕಾಪು ವಲಯದ ಪ್ರಧಾನ ಕಾರ್ಯದರ್ಶಿ ದಿವಾಕರ ಶೆಟ್ಟಿ ಗುರುವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಹರಿವರಾಸನಂ ಎಂಬ ಶೀರ್ಷಿಕೆಯಡಿ ಶ್ರೀ ಹರಿಹರಾತ್ಮಜ ಅಷ್ಟಕಂ ಶತಮಾನೋತ್ಸವ ಕಾರ್ಯಕ್ರಮವನ್ನು ಎಲ್ಲೆಡೆ ಸಂಭ್ರಮ ಸಡಗರದಿಂದ ಆಯೋಜಿಸಲಾಗಿದ್ದು, ಕಾಪುವಿನಲ್ಲೂ ಈ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಸ್ಪರ್ಧೆಯಲ್ಲಿ 100 ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದು. ಅವರಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು. ಜ.1ರಂದು ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಮುಂಭಾಗದಲ್ಲಿ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದದ ವತಿಯಿಂದ ಭಜನಾ ಕಾರ್ಯಕ್ರಮ ನಡೆದು, ಬಳಿಕ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, 12.30 ರಿಂದ ಸಾರ್ವಜನಿಕ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತ ಸಮಿತಿ ಕಾಪು ನೇತೃತ್ವದಲ್ಲಿ 42ನೇ ವರ್ಷದ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ 2.30ರಿಂದ ಹರಿವರಾಸನಂ ನೃತ್ಯ ಕಾರ್ಯಕ್ರಮ, ಬಳಿಕ ಸಭಾಭವನದಲ್ಲಿ 3.00 ಗಂಟೆಗೆ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಮತ್ತು ಹಿರಿಯ ಗುರುಸ್ವಾಮಿಗಳಾದ ಏಕನಾಥ ಸ್ವಾಮಿ ಹೆಜಮಾಡಿ, ಗೋಪಾಲ ಗುರುಸ್ವಾಮಿ ಬೆಳಪು, ನಾರಾಯಣ ಗುರುಸ್ವಾಮಿ ಕಾಪು, ಗೋಪಾಲ ಗುರುಸ್ವಾಮಿ ಶಿರ್ವ, ಸುರೇಶ್ ಗುರುಸ್ವಾಮಿ ಕಟಪಾಡಿ ಮೊದಲಾದವರಿಗೆ ಗೌರವಾರ್ಪಣೆ ನಡೆಯಲಿದೆ.
ಕೋಟೆ ಪರೆಂಕುದ್ರು ಮಹಾಂಕಾಳಿ ಮಂತ್ರದೇವತೆ ಸನ್ನಿಧಿಯ ಧರ್ಮದರ್ಶಿ ಸುಧರ್ಮ ಶ್ರೀಯಾನ್
ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಯುವ ವಾಗಿ ಶ್ರೀಕಾಂತ್ ಶೆಟ್ಟಿ ಹರಿವರಾಸನಂ ಉಪನ್ಯಾಸ ನೀಡಲಿದ್ದಾರೆ. ಸಾಸ್ ಕಾಪು ವಲಯ ಅಧ್ಯಕ್ಷ ರಘುರಾಮ ಶೆಟ್ಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಗಣ್ಯರಾದ ಸುರೇಶ್ ಶೆಟ್ಟಿ ಗುರ್ಮೆ, ಎಸ್.ಎನ್. ಕೃಷ್ಣಯ್ಯ, ಜೆ ವಸಂತ್ ಕುಮಾರ್, ರಾಧಾಕೃಷ್ಣ ಮೆಂಡನ್, ವಾಸುದೇವ ಶೆಟ್ಟಿ, ಲೀಲಾಧರ ಶೆಟ್ಟಿ, ಮನೋಹರ ಶೆಟ್ಟಿ, ಡಾ| ಪ್ರಶಾಂತ್ ಶೆಟ್ಟಿ, ಪ್ರಭಾಕರ ಪೂಜಾರಿ, ನಡಿಕೆರೆ ರತ್ನಾಕರ ಶೆಟ್ಟಿ, ಜಯಂತಿ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ (ಸಾಸ್) ಕಾಪು ವಲಯದ
ಅಧ್ಯಕ್ಷ ರಘುರಾಮ ಶೆಟ್ಟಿ, ಉಪಾಧ್ಯಕ್ಷ ಸಂತೋಷ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ದಿವಾಕರ ಶೆಟ್ಟಿ, ಕಾರ್ಯದರ್ಶಿ ನಾಗೇಶ್, ಗೌರವಾಧ್ಯಕ್ಷ ನಾರಾಯಣ ಗುರುಸ್ವಾಮಿ ಉಪಸ್ಥಿತರಿದ್ದರು.