ಕಾಪು : ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮವನ್ನು ಕಾಪು ತಾಲೂಕಿನಲ್ಲಿ ಜನವರಿ
ತಿಂಗಳಲ್ಲಿ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆಯನ್ನು ಮಂಗಳವಾರ ಕಾಪು ಪುರಸಭೆಯಲ್ಲಿ ಆಯೋಜಿಸಲಾಗಿತ್ತು.
ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಈಗಾಗಲೇ ಉಡುಪಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ರಜತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಕಾಪು ತಾಲೂಕಿನಲ್ಲಿ ಜನವರಿ 21 ರಂದು ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಕಾಪು ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ, ಕಾಪು ಪೋಲಿಸ್ ವೃತ್ತ ನಿರೀಕ್ಷಕರಾದ ಪೂವಯ್ಯ, ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ ನಾವಡ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ಸುದಾಮ ಶೆಟ್ಟಿ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ರಾಜಕೀಯ ಮುಖಂಡರು, ಮತ್ತಿತರರು ಉಪಸ್ಥಿತರಿದ್ದರು.