ಕುಲಾಲ ಸಮಾಜ ಸೇವಾ ಸಂಘ, ಮಹಿಳಾ ಘಟಕ ಬೆಳಪು : ವಾರ್ಷಿಕ ಮಹಾಸಭೆ, ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ
Posted On:
09-01-2023 08:18PM
ಕಾಪು : ಕುಲಾಲ ಸಮಾಜ ಸೇವಾ ಸಂಘ (ರಿ ) ಬೆಳಪು ಇದರ ಸಂಘದ ವಾರ್ಷಿಕ ಮಹಾಸಭೆಯು ಜನವರಿ 08 ರಂದು ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಪಣಿಯೂರು ಇದರ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ
ಬೆಳಪು ವ್ಯವಸಾಯ ಸೇವಾ ಸಂಘದ ಅಧ್ಯಕ್ಷರಾದ ಡಾ|| ದೇವಿಪ್ರಸಾದ್ ಶೆಟ್ಟಿ ಮುಂದಿನ ದಿನಗಳಲ್ಲಿ ಬೆಳಪುವಿನಲ್ಲಿ ಆರಂಭ ಆಗುವ ಕಾರ್ಖಾನೆಗಳಲ್ಲಿ ಕುಲಾಲ ಸಮುದಾಯದವರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಿಕೊಡುವುದಲ್ಲದೆ ಕುಲಾಲ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳದ ವ್ಯವಸ್ಥೆಯನ್ನು ಮಾಡಿಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭ ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಐತು ಕುಲಾಲ್ ಕನ್ಸಾನ, ಗಣೇಶ್ ಪಂಜಿಮಾರು ಮತ್ತು ಸಂಘದ ಹಿರಿಯರಾದ ಕುಟ್ಟಿ ಮೂಲ್ಯ ಇವರನ್ನು ಸನ್ಮಾನಿಸಲಾಯಿತು. ಕಲಿಕೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಸುಧಾಕರ್ ಕುಲಾರ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂದೀಪ್ ಮೂಲ್ಯ, ಗೀತಾ ವೈ,ಉಮೇಶ್ ಕುಲಾಲ್ ಉಪಸ್ಥಿತರಿದ್ದರು. ಕೋಶಾಧಿಕಾರಿ ಹರೀಶ್ ಕುಲಾಲ್ ವಾರ್ಷಿಕ ವರದಿ ಮಂಡಿಸಿದರು. ಮಲ್ಲಿಕಾ ಉಮೇಶ್ ಮಹಿಳಾ ಘಟಕದ ವರದಿಯನ್ನು ಮಂಡಿಸಿದರು. ಜನಾರ್ದನ್ ಕುಲಾಲ್ ಸ್ವಾಗತಿಸಿದರು. ಸತೀಶ್ ಕುಲಾಲ್ ಕುಂಜೂರು ಕಾರ್ಯಕ್ರಮ ನಿರೂಪಿಸಿದರು. ಸುಜಯ ಕುಲಾಲ್ ವಂದಿಸಿದರು.