ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮದ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
Posted On:
15-01-2023 10:40PM
ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ.) ಮತ್ತು ಮಹಿಳಾ ಬಳಗ ಇದರ ಸಭೆಯಲ್ಲಿ ಕಟಪಾಡಿ ಶ್ರೀ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನದಲ್ಲಿ ನಡೆಯುವ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಬಗ್ಗೆ ಮಾಹಿತಿ ಮತ್ತು ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮದ ದಶಮಾನೋತ್ಸವದ ಆಮಂತ್ರಣ ಪತ್ರಿಕೆಯನ್ನು ಕಟಪಾಡಿ ಶ್ರೀ ಕಾಳಿಕಾಂಬ ವಿಶ್ವಕರ್ಮೇಶ್ವರ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ನವೀನ ಆಚಾರ್ಯ ಪಡುಬಿದ್ರಿ ಬಿಡುಗಡೆಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು ನಾವು ಪ್ರತಿದಿನ ಶ್ರದ್ದಾ ಭಕ್ತಿಯಿಂದ ಕುಲ ದೇವರನ್ನು ನೆನೆದು ಪ್ರಾರ್ಥಿಸಿದರೆ ನಿಮ್ಮ ಕೆಲಸ ಕಾರ್ಯ ಸುಗಮ ರೀತಿಯಲ್ಲಿ ನಡೆಯುತ್ತದೆ ದೇವರಿಗೆ ನಾವು ಶರಣಾದರೆ ದೇವರು ನಮಗೆ ಶರಣಾಗುತ್ತಾನೆ ಎಂದರು.
ಈ ಸಂದರ್ಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ವಿಶ್ವ ಬ್ರಾಹ್ಮಣ ಯುವ ಸಂಘಟನೆಯ ಅಧ್ಯಕ್ಷರಾದ ಸುಧಾಕರ ಆಚಾರ್ಯ ಬಿಳಿಯಾರು, ಬಂಟಕಲ್ಲು ವಿಶ್ವಕರ್ಮ ಸಂಘದ ಅಧ್ಯಕ್ಷರಾದ ಮುರಳಿಧರ ಆಚಾರ್ಯ, ಸ್ಥಳೀಯ ಮೊಕ್ತೇಸರರು, ಯುವ ಸಂಗಮದ ಗೌರವಾಧ್ಯಕ್ಷ ಸುರೇಶ್ ಆಚಾರ್ಯ, ಮಹಿಳಾ ಬಳಗದ ಅಧ್ಯಕ್ಷೆ ಸುಮತಿ ಭಾಸ್ಕರಾಚಾರ್ಯ, ಶೋಭಾ ಶಂಕರಚಾರ್ಯ ಉಪಸ್ಥಿತರಿದ್ದರು.
ಅಧ್ಯಕ್ಷ ಉಮೇಶ್ ಆಚಾರ್ಯ ಸ್ವಾಗತಿಸಿ, ದಶಮಾನೋತ್ಸವದ ಸಂಚಾಲಕ ಪ್ರಶಾಂತ್ ಆಚಾರ್ಯ ವಂದಿಸಿದರು. ಕಾರ್ಯದರ್ಶಿ ಮಾಧವಾಚಾರ್ಯ ಕಾರ್ಯಕ್ರಮ ನಿರೂಪಿಸಿದರು