ಶಿರ್ವ : ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ; ಸರಕಾರ ಪ್ರೋತ್ಸಾಹ ಧನ ಹೆಚ್ಚಿಸಿ ಹೈನುಗಾರರ ಕಷ್ಟಕ್ಕೆ ಸ್ಪಂದಿಸಬೇಕು - ಬೋಳ ಸದಾಶಿವ ಶೆಟ್ಟಿ
Posted On:
19-01-2023 05:27PM
ಶಿರ್ವ : ಸ್ಥಳೀಯ ಹೋಟೆಲ್ ಶಾಮ್ ಸ್ಕ್ವೇರ್ ಸಭಾಂಗಣದಲ್ಲಿ ಜರುಗಿದ ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡುತ್ತಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿಯವರು ಹೈನುಗಾರರ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿದೆ. ಸರಕಾರವು ಪ್ರೋತ್ಸಾಹ ಧನವನ್ನು ಹೆಚ್ಚಿಸುವ ಮೂಲಕ ಹೈನುಗಾರರ ಕಷ್ಟಕ್ಕೆ ಸ್ಪಂದಿಸಬೇಕು ಎಂದರು.
ಸಭಾಧ್ಯಕ್ಷತೆಯನ್ನು ಕಾಪು ತಾಲೂಕು ಸಹಕಾರ ಭಾರತಿ ಅಧ್ಯಕ್ಷ ರಾದ ಗಂಗಾಧರ ಸುವರ್ಣ ವಹಿಸಿದ್ದರು.
ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟ ಸಂಚಾಲಕರಾದ ಸಾಣೂರು ನರಸಿಂಹ ಕಾಮತ್ ಅವರು ಸಂಘಟನಾತ್ಮಕ ಮಾತುಗಳನ್ನಾಡಿದರು. ಜಿಲ್ಲಾ ಪ್ಯಾಕ್ಸ್ ಪ್ರಕೊಷ್ಟ ಸಂಚಾಲಕರೂ ಶಿರ್ವ ಸಿ. ಎ.ಬ್ಯಾಂಕ್ ಅಧ್ಯಕ್ಷರೂ ಆದ ಕುತ್ಯಾರು ಪ್ರಸಾದ್ ಶೆಟ್ಟಿ ಹಾಗೂ ಕಾಪು ತಾಲೂಕು ಸಂಚಾಲಕರಾದ ಸುಧಾಮ ಶೆಟ್ಟಿ ಮಲ್ಲಾರು ವೇದಿಕೆಯಲ್ಲಿದ್ದರು.
ಸಮಾರಂಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿನೇಶ್ ಬಲ್ಲಾಳ್ ಕುತ್ಯಾರು, ರಘುವೀರ ಶೆಣೈ ಮುಂಡ್ಕೂರು ಹಾಗೂ ತಾಲೂಕಿನ ವಿವಿಧ ಸಹಕಾರಿ ಸಂಘಗಳ ನಿರ್ದೇಶಕರು, ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವೀರೇಂದ್ರ ಪಾಟ್ಕರ್ ಪ್ರಾರ್ಥಿಸಿದರು. ಗಂಗಾಧರ ಸುವರ್ಣ ಸ್ವಾಗತಿಸಿದರು. ರವೀಂದ್ರ ಪಾಟ್ಕರ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಮುರಳೀಧರ ಪೈ ಕಟಪಾಡಿ ವಂದಿಸಿದರು.