ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಇವರ ನೇತೃತ್ವದಲ್ಲಿ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವು ಎರ್ಮಾಳು ಇಂಸ್ಟೆಂಟ್ ಸೀ ರೆಸಾರ್ಟ್ ನಲ್ಲಿ ಆದಿತ್ಯವಾರ ಜರಗಿತು.
ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನ ಗಣೇಶ್, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಗೀತಾಂಜಲಿ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಕೊಡಿಬೆಟ್ಟು, ಗೋಪಾಲಕೃಷ್ಣ ರಾವ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಹಾಗೂ ವೇದಿಕೆಯಲ್ಲಿ ಪಕ್ಷದ ಜವಾಬ್ದಾರಿ ನಿರ್ವಹಿಸುತ್ತಿರುವ ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.