ಕಾಪು : ಕಳತ್ತೂರು ಪಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕರು ಗೋಪಾಲ ಕೃಷ್ಣ ರಾವ್ ಇವರಿಗೆ ಗುರುವಂದನಾ ಕಾರ್ಯಕ್ರಮ ನಡೆಸುವ ಬಗ್ಗೆ ಶಾಲೆಯ ಹಳೆ ವಿದ್ಯಾರ್ಥಿಗಳ ಪೂರ್ವಭಾವಿ ಸಭೆಯನ್ನು ಪಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲಾ ಸಭಾ ಭವನದಲ್ಲಿ ಜನವರಿ 29, ಭಾನುವಾರ ಬೆಳಿಗ್ಗೆ 9.30 ಕ್ಕೆ ಜರಗಲಿದೆ.
ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪಯ್ಯಾರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಪಯ್ಯಾರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.