ಕಾಪು(ಜೂನ್ 29 ನಮ್ಮ ಕಾಪು ನ್ಯೂಸ್) ಕಾಪುವಿನ ಕುತ್ಯಾರಿನ ಯುವಕರ ತಂಡವೊಂದು ಸಮಾಜಕ್ಕೆ ಉತ್ತಮ ಸಂದೇಶ ಸಾರುವಂತಹ ಕಿರುಚಿತ್ರ ಜಂಕ್ಷನ್ ಅತೀ ಶೀಘ್ರದಲ್ಲಿ ತಮ್ಮ ನಡುವೆ ಬರಲಿದ್ದು,ಕಿರುಚಿತ್ರದ ಮೂಹೂರ್ತವು ನಿನ್ನೆ ಕುತ್ಯಾರು ಶ್ರೀ ವೀರಭದ್ರ ದೇವಸ್ದಾನದಲ್ಲಿ ನಡೆಯಿತು..
ಪ್ರವೀಣ್ ಡಿ ಆಚಾರ್ಯ ಇವರ ಸುಂದರ ಕಥೆ,ನಿರ್ದೇಶನ ಸಂಭಾಷಣೆ ಜೊತೆಗೆ ನಿರ್ಮಾಪಕರಾಗಿ ಯುವಕರ ಪಾಲಿನ ಉತ್ಸಾಹಿ ಚಿಲುಮೆ ಶ್ರೀ ಪ್ರಸಾದ್ ಕುತ್ಯಾರು,ಶ್ರೀ ಜಿನೇಶ್ ಬಲ್ಲಾಳ್,ಶ್ರೀ ನಿತೇಶ್ ಭಂಡಾರಿ ಕುತ್ಯಾರು,ಶ್ರೀಮತಿ ಸರಿತಾ ಕುಲಾಲ್,ಉದ್ಯಮಿ ಶ್ರೀ ರಾಜೇಶ್ ಶೆಟ್ಟಿ(ಶಬರಿ ಶಾಮಿಯಾನ) ನಿರ್ವಸಿರುತ್ತಾರೆ..
ಶ್ರೀ ನಿಲೇಶ್ ದೇವಾಡಿಗ ಇವರ ಕ್ಯಾಮರದಲ್ಲಿ ಸೆರೆಯಾಗುವ ಈ ಕಿರುಚಿತ್ರಕ್ಕೆ ಶ್ರೀ ಬಸಂತ್ ಕುಮಾರ್ ಪೊಸ್ಟರ್ ಹಾಗೂ ಎಡಿಟಿಂಗ್ ಮಾಡಿ ಶ್ರೀ ಧೀರಜ್ ಕುಲಾಲ್ ಕುತ್ಯಾರು ಈ ತಂಡಕ್ಕೆ ಸಂಪೂರ್ಣ ಸಹಕಾರ ನೀಡಿರುತ್ತಾರೆ...
ಒಂದೊಳ್ಳೆ ಕಿರುಚಿತ್ರವಾಗಿ ಜನಮಾನಸದಲ್ಲಿ ನೆಲೆಯೂರಲಿ ಎನ್ನುತ್ತ ತಂಡದ ಸರ್ವರಿಗೂ ನಮ್ಮ ಕಾಪು ನ್ಯೂಸ್ ತಂಡ ಶುಭವನ್ನ ಕೊರುತ್ತದೆ...