ನಮ್ಮ ಕಾಪು ನ್ಯೂಸ್ :- ಕಾಪು ಕ್ಷೇತ್ರದ ಹಾಗೂ ಸುತ್ತಮುತ್ತಲಿನ ಪ್ರದೇಶದ ಸುದ್ದಿಯನ್ನು ಮತ್ತು ಜಾಹಿರಾತನ್ನು ಪ್ರಕಟಿಸಲು ಸಂಪರ್ಕಿಸಿ : +91 932 658 3640

Namma Kaup News

ಪಡುಬಿದ್ರಿ : ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (ಎಸ್ ಡಿ ಟಿ ಯು) ವತಿಯಿಂದ ಗಣರಾಜ್ಯೋತ್ಸವ ಆಚರಣೆ

Posted On: 26-01-2023 07:11PM

ಪಡುಬಿದ್ರಿ : ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (ಎಸ್ ಡಿ ಟಿ ಯು) ವತಿಯಿಂದ ಪಡುಬಿದ್ರಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.

ಎಸ್ ಡಿ ಟಿ ಯು ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಖಾದರ್ ಮಲ್ಲಾರ್ ಧ್ವಜಾರೋಹಣಗೈದರು. ಈ ಸಂದರ್ಭ ಮಾತನಾಡಿದ ಅವರು ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವದ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆಯೋ, ಅಷ್ಟೇ ಸಂಭ್ರಮದಿಂದ ದೇಶದಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಯಾದ ಎಸ್ ಡಿ ಟಿ ಯು ಉಡುಪಿ ಜಿಲ್ಲೆ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಎಸ್ ಡಿ ಟಿ ಯು ಎಂಬುವುದು ಕಾರ್ಮಿಕರನ್ನು ಒಟ್ಟು ಗೂಡಿಸಿ ಅವರ ಹಕ್ಕು ಮತ್ತು ಅವಕಾಶಗಳಿಗಾಗಿ ಹೋರಾಟ ಮಾಡುವ ಒಂದು ಒಕ್ಕೂಟವಾಗಿದೆ. ಈ ನಿಟ್ಟಿನಲ್ಲಿ ಸಂವಿಧಾನ ನೀಡಿದ ಎಲ್ಲಾ ಹಕ್ಕುಗಳನ್ನು ಸದುಪಯೋಗಪಡಿಸಿ ಕಾರ್ಮಿಕರು ಸಮಾಜದಲ್ಲಿ ಉತ್ತಮ ಬದುಕನ್ನು ಸಾಧಿಸಲು ಎಸ್ ಡಿ‌ ಟಿ ಯು ಶ್ರಮಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ಎಸ್ ಡಿ ಟಿ ಯು ಪಡುಬಿದ್ರಿ ಘಟಕದ ಅಧ್ಯಕ್ಷ ರಿಯಾಜ್ ಕಂಚಿನಡ್ಕ , ಪಡುಬಿದ್ರಿ ಘಟಕದ ಪ್ರಧಾನ ಕಾರ್ಯದರ್ಶಿ ಹೈದರ್ ಕಂಚಿನಡ್ಕ, ಜಿಲ್ಲಾ ಸಮಿತಿ ಸದಸ್ಯ ಫಿರೋಜ್, ಅನ್ವರ್, ಎಸ್ ಡಿ ಪಿ ಐ ಪಡುಬಿದ್ರಿ ಗ್ರಾಮ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ, ಮತ್ತಿತರರು ಉಪಸ್ಥಿತರಿದ್ದರು.