ಕಾಪು : ತಾಲೂಕಿನ ರಾಷ್ಟ್ರೀಯ ಹಾಗೂ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ
74ನೇ ಗಣರಾಜ್ಯೋತ್ಸವ ದಿನಾಚರಣೆ ಸಂಭ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಜರಗಿತು.
ಈ ಸಂದರ್ಭ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಕೇಂದ್ರಗಳಲ್ಲಿ ಗ್ರಾಮೀಣ ಭಾಗದ ನಾಗರಿಕರಿಗೆ ನಿಗದಿತ ಸಮಯದಲ್ಲಿ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾಪು ತಾಲೂಕಿನಲ್ಲಿ ಪ್ರಥಮ ಸ್ಥಾನ ಹಾಗೂ ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಪಡೆದ ಶಿರ್ವ ಗ್ರಾಮದ ಪ್ರಜ್ವಲ್ ಡಿಜಿಟಲ್ ಗ್ರಾಮ ಒನ್ ಕೇಂದ್ರದ ಪ್ರಜ್ವಲ್ ಬಿ ಕುಲಾಲ್, ಉಚ್ಚಿಲ ಬಡ ಗ್ರಾಮಪಂಚಾಯತ್ ನ ದೀರೇಶ್ ಡಿಪಿ ದ್ವಿತೀಯ,
ಕೋಟೆ ಗ್ರಾಮ ಪಂಚಾಯತ್ ನ ಸಹನಾ ದಯಾನಂದ ತಿಂಗಳಾಯ ತೃತೀಯ ಸ್ಥಾನದ ನಿಮಿತ್ತ ಪ್ರಶಂಸನಾ ಪತ್ರವನ್ನು ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಸುಧಾಮ ಶೆಟ್ಟಿ, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ ಬಿ, ಕಾಪು ವೃತ್ತ ನಿರೀಕ್ಷಕರಾದ ಪೂವಯ್ಯ ಕೆ.ಸಿ, ಉಪ ತಹಶೀಲ್ದಾರ್ ಹರಿಪ್ರಸಾದ್ ಭಟ್, ಕಂದಾಯ ನಿರೀಕ್ಷಕ ಸುಧೀರ್ ಶೆಟ್ಟಿ, ಶಿರ್ವ ಗ್ರಾಮ ಕರಣಿಕ ವಿಜಯ್ ಮತ್ತು ಕಾಪು ಪುರಸಭಾ ಸದಸ್ಯರು, ಗ್ರಾಮಗಳ ಆಡಳಿತಾಧಿಕಾರಿಗಳು, ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.