ಕಾಪು : ಜೇಸಿಐ ಕಾಪುವಿನ ರಜತ ವರ್ಷಾಚರಣೆಯ ಸಮಾರೋಪ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ರಜತ ಸಂಭ್ರಮ ಸಮಾರಂಭವು ಜ. 28ರಂದು ಸಂಜೆ 6 ಗಂಟೆಗೆ ಕಾಪು ಪೇಟೆಯಲ್ಲಿ ನಡೆಯಲಿದೆ.
ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ರಜತ ವರ್ಷಾಚರಣೆ ಸಮಿತಿ ಅಧ್ಯಕ್ಷ ದೀಪಕ್ ಕುಮಾರ್ ಎರ್ಮಾಳ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ವಿನಯಕುಮಾರ್ ಸೊರಕೆ, ಗುರ್ಮೆ ಫೌಂಡೇಷನ್ ಅಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ, ಜೇಸಿಐ ವಲಯಾಧ್ಯಕ್ಷ ಪುರುಷೋತ್ತಮ್ ಶೆಟ್ಟಿ, ಗಣ್ಯರಾದ ಯಶ್‌ಪಾಲ್ ಸುವರ್ಣ, ಕಿಶೋರ್ ಆಳ್ವ, ವಾಸುದೇವ ಶೆಟ್ಟಿ, ದೇವಿಪ್ರಸಾದ್ ಶೆಟ್ಟಿ, ವೈ. ಸುಕುಮಾರ್, ಅಲ್ ರೋಹನ್ ವಾಝ್, ರಾಕೇಶ್ ಕೆ., ಕಾಪು ದಿವಾಕರ ಶೆಟ್ಟಿ, ಮನೋಹರ್ ಎಸ್. ಶೆಟ್ಟಿ, ವೆಂಕಟೇಶ್ ನಾವಡ, ಪ್ರಭಾಕರ ಪೂಜಾರಿ, ಸಂಕಪ್ಪ ಅಮೀನ್, ಹರೀಶ್ ಅಮೀನ್, ಮಾಲಿನಿ ಶೆಟ್ಟಿ, ಜ್ಯೋತಿ ಶಂಕರ್ ಸಾಲ್ಯಾನ್ ಮೊದಲಾದವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ರಜತ ಸಂಭ್ರಮ ಸಮಾರಂಭದ ಪ್ರಯುಕ್ತ ಕಳೆದ ಇಪ್ಪತ್ತೈದು ವರ್ಷಗಳಲ್ಲಿ ಕಾಪು ಜೇಸಿಐನ ಕಾರ್ಯಕ್ರಮಗಳಿಗೆ ಸಹಕರಿಸಿದ ಕಾಪು ಪರಿಸರದ ವಿವಿಧ ಸಂಘ ಸಂಸ್ಥೆಗಳಿಗೆ ರಜತ ಪುರಸ್ಕಾರ ಗೌರವಾರ್ಪಣೆ, ನೃತ್ಯ ವೈಭವ, ಸಂಗೀತ ರಸಮಂಜರಿ ಮತ್ತು ಸಿನಿ ತಾರೆಯರ ಸಂಗಮ ನಡೆಯಲಿದೆ ಎಂದು ರಜತ ಸಮಿತಿಯ ಮತ್ತು ಕಾಪು ಜೇಸಿಐನ ಪ್ರಕಟಣೆಯು ತಿಳಿಸಿದೆ.